ಸಂಸದ, ಆದಿವಾಸಿ ನಾಯಕ ಮನ್ಸುಖ್ ವಾಸವ ಬಿಜೆಪಿಗೆ ರಾಜೀನಾಮೆ

Prasthutha|

ವಡೋದರಾ : ಪ್ರಧಾನಿ ನರೇಂದ್ರ ಮೋದಿ ಸರಕಾರದಲ್ಲಿ ಸಚಿವರಾಗಿದ್ದ, ಗುಜರಾತ್ ನ ಭರೂಚ್ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿರುವ, ಆದಿವಾಸಿ ನಾಯಕ ಮನ್ಸುಖ್ ವಾಸವ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಮುಂಬರುವ ಸಂಸತ್ ಅಧಿವೇಶನದ ವೇಳೆ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಅವರು ಘೋಷಿಸಿದ್ದಾರೆ.

- Advertisement -

ನರ್ಮದಾ ಜಿಲ್ಲೆಯ 121 ಗ್ರಾಮಗಳನ್ನು ಪರಿಸರ ಸೂಕ್ಷ್ಮ ವಲಯ ಎಂದು ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಹೊರಡಿಸಿದ ಅಧಿಸೂಚನೆಯನ್ನು ವಾಪಾಸ್ ಪಡೆಯುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಎರಡು ದಿನಗಳಲ್ಲಿಯೇ ವಾಸವ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಗುಜರಾತ್ ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ಅವರಿಗೆ ವಾಸವ ಪತ್ರ ಬರೆದು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ಸರ್ದಾರ್ ಪಟೇಲ್ ಅವರ ಏಕತೆಯ ಪ್ರತಿಮೆಯ ಸುತ್ತಲಿನ 121 ಗ್ರಾಮಗಳನ್ನೂ ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಲಾಗಿದೆ. ರೈತರ ಹಾಗೂ ಸ್ಥಳೀಯರ ಹಿತಾಸಕ್ತಿ ಗಮನದಲ್ಲಿರಿಸಿ ಅಧಿಸೂಚನೆ ಪಡೆಯಬೇಕೆಂದು ಇತ್ತೀಚೆಗೆ ವಾಸವ ಪ್ರಧಾನಿಗೆ ಪತ್ರ ಬರೆದಿದ್ದರು.

- Advertisement -

ಅಧಿಸೂಚನೆಯ ನೆಪದಲ್ಲಿ ಅಧಿಕಾರಿಗಳು ಆದಿವಾಸಿಗಳ ಖಾಸಗಿ ಜಮೀನುಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಈ ಕ್ರಮದ ಕುರಿತಂತೆ ಸ್ಥಳೀಯರನ್ನು ವಿಶ್ವಾಸಕ್ಕೆ ಪಡೆಯಲಾಗಿಲ್ಲದೇ ಇರುವುದರಿಂದ ಜನರಲ್ಲಿ ಭಯ ಮೂಡಿದೆ ಎಂದು ವಾಸವ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

Join Whatsapp