ಮಡಿಕೇರಿ ವಿಧಾನಪರಿಷತ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿಜೆಪಿ ನಾಯಕ ಎ ಮಂಜು ಪುತ್ರ ಮಂಥರ್ ಗೌಡ ನಾಮಪತ್ರ ಸಲ್ಲಿಕೆ !

Prasthutha|

ಮಡಿಕೇರಿ ; ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ , ಬಿಜೆಪಿ ನಾಯಕ ಎ.ಮಂಜು ಅವರ ಪುತ್ರ ಮಂಥರ್ ಗೌಡ ನಾಮಪತ್ರ ಸಲ್ಲಿಸಿದ್ದಾರೆ. ಕೊಡಗು ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಥರ್ ಗೌಡ ಕಣಕ್ಕಿಳಿದಿದ್ದಾರೆ.

- Advertisement -

ಇಂದು ಅವರು ಮಡಿಕೇರಿಯಲ್ಲಿ ನಾಮಪತ್ರ ಸಲ್ಲಿಸಿದ ಮಂಥರ್ ಗೌಡ ಜನ ಬೆಂಬಲದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಶಾಂತೆಯoಡ ವೀಣಾಅಚ್ಚಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಮುಖಂಡರಾದ ಹೆಚ್.ಎಸ್.ಚಂದ್ರಮೌಳಿ, ಹಸೈನಾರ್ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.

Join Whatsapp