ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಮಂತ್ರಿಗಿರಿಗೆ ರಾಜಿನಾಮೆ ನೀಡಲು ಸಿದ್ಧ: ಕೆಎನ್ ರಾಜಣ್ಣ

Prasthutha|

ಬೆಂಗಳೂರು: ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ, ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಸಚಿವ ಕೆಎನ್ ರಾಜಣ್ಣ ಹೇಳಿದರು.

- Advertisement -


ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಧ್ಯಕ್ಷರ ಬದಲಾವಣೆ ಸನ್ನಿವೇಶ ಎದುರಾದರೆ ನಾನು ಅಧ್ಯಕ್ಷನಾಗಲು ಸಿದ್ಧನಿದ್ದೇನೆ. ಅಧ್ಯಕ್ಷ ಸ್ಥಾನ ಸಿಕ್ಕರೆ ಮಂತ್ರಿ ಸ್ಥಾನ ಬಿಡಲು ನಾನು ತಯಾರಿದ್ದೇನೆ. ನಾನು ಮುಂದೆ ಯಾವುದೆ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ಅಧ್ಯಕ್ಷ ಸ್ಥಾನ ಸಿಕ್ಕರೆ ಪಕ್ಷಕ್ಕಾಗಿ ತನು,ಮನ ಅರ್ಪಿಸುತ್ತೇನೆ ಎಂದರು. ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ಹೆಚ್ಚುತ್ತಲೇ ಇದೆ. ಮಾದಕ ವಸ್ತು ನಿಗ್ರಹ ದಳ ಹೆಚ್ಚು ಕಾರ್ಯೋನ್ಮುಕವಾಗಬೇಕು. 2647 ಪೆನ್ ಡ್ರೈವ್ ಇದೆ ಅಂತಾರೆ. ಹೀಗಾಗಿ ಸಂತ್ರಸ್ಥರಿಂದ ಹೆಲ್ಫ್ ಲೈನ್ ಗೆ ದೂರು ಬಂದಿರಬಹುದು ಎಂದರು.

Join Whatsapp