ಮಹಾರಾಷ್ಟ್ರ: ಎನ್ ಕೌಂಟರ್ ನಲ್ಲಿ ಎಂಟು ಮಾವೋವಾದಿಗಳ ಹತ್ಯೆ

Prasthutha|

ಪುಣೆ: ಮಹಾರಾಷ್ಟ್ರದಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಎಂಟು ಮಂದಿ ಮಾವೋವಾದಿಗಳನ್ನು ಹತ್ಯೆ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

- Advertisement -

ಮಾತ್ರವಲ್ಲ ಶನಿವಾರ ಕೊಡ್ಗುಲ್ ಗ್ಯಾರಹ್ ಪಟ್ಟಿಯಲ್ಲಿನ ಕಾಡಿನಲ್ಲಿ ನಡೆದ ಗುಂಡಿನ ವಿನಿಮಯದಲ್ಲಿ ಹನ್ನೆರಡು ಮಂದಿ ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಶನಿವಾರ ಬೆಳಿಗ್ಗೆ 6.30 ಕ್ಕೆ ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ಮಾವೋವಾದಿಗಳ ಹತ್ಯೆ ನಡೆಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಗೋಯಲ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

- Advertisement -

ಘಟನಾ ಸ್ಥಳದಿಂದ ಅಪಾರ ಪ್ರಮಾಣದ ಆಯುಧ ಮತ್ತು ಇನ್ನಿತರ ಸಾಮಾಗ್ರಿಗಳನ್ನು ವಶಪಡಿಸಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಪ್ರಸಕ್ತ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಚುರುಕುಗೊಳಿಸಿದ್ದಾರೆ.

Join Whatsapp