ಹಿಂಸಾಚಾರಕ್ಕೆ ತಿರುಗಿದ ಮರಾಠ ಮೀಸಲಾತಿ ಪ್ರತಿಭಟನೆ: ಹಲವರಿಗೆ ಗಾಯ, ವಾಹನಗಳಿಗೆ ಬೆಂಕಿ

Prasthutha|

ಜಲ್ನಾ: ಮರಾಠ ಮೀಸಲಾತಿಗೆ ಒತ್ತಾಯಿಸಿ ನಡೆಸಿದ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ಸಂಭವಿಸಿದ್ದು, ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿರುವ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಡೆದಿದೆ.

- Advertisement -


ಪ್ರತಿಭಟನೆಯ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಬಳಿಕ ಆಕ್ರೋಶಗೊಂಡ ಪ್ರತಿಭಟನಾಕಾರರ ಗುಂಪು, ಶನಿವಾರ ಕಲ್ಲು ತೂರಾಟ ನಡೆಸಿರುವುದಾಗಿ ವರದಿಯಾಗಿದೆ.


ಮರಾಠ ಮೀಸಲಾತಿಗೆ ಒತ್ತಾಯಿಸಿ ಶುಕ್ರವಾರ ನಡೆದ ಪ್ರತಿಭಟನೆಯು ಕೂಡ ಹಿಂಸಾಚಾರಕ್ಕೆ ತಿರುಗಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಇದರ ಪರಿಣಾಮವಾಗಿ ಪೊಲೀಸ್ ಅಧಿಕಾರಿಗಳು ಸೇರಿದಂತೆ ಸುಮಾರು 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -