ಮರಾಠಿಗರಿಗೆ ಮೀಸಲಾತಿ ನೀಡುವ ಕಾನೂನು ರದ್ದುಪಡಿಸಿದ ಸುಪ್ರೀಂಕೋರ್ಟ್

Prasthutha|


ಹೊಸದಿಲ್ಲಿ : ರಾಜ್ಯದಲ್ಲಿ ಸರ್ಕಾರಿ ಉದ್ಯೋಗ ಮತ್ತು ಶೈಕ್ಷಣಿಕ ಪ್ರವೇಶಾತಿಯಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡಲು ಮಹಾರಾಷ್ಟ್ರ ಸರ್ಕಾರ ರೂಪಿಸಿದ ಕಾನೂನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.

- Advertisement -


ಮೀಸಲು ವರ್ಗಕ್ಕೆ ಸೇರಿಸುವ ಸಲುವಾಗಿ ಮರಾಠಾ ಸಮುದಾಯವನ್ನು ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ಸಮುದಾಯವೆಂದು ಘೋಷಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.


ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಲ್ ನಾಗೇಶ್ವರ ರಾವ್, ಎಸ್ ಅಬ್ದುಲ್ ನಝೀರ್, ಹೇಮಂತ್ ಗುಪ್ತಾ ಮತ್ತು ಎಸ್ ರವೀಂದ್ರ ಭಟ್ ಅವರನ್ನು ಒಳಗೊಂಡ ಐವರು ನ್ಯಾಯಾಧೀಶರ ಪೀಠವು, ಮೀಸಲಾತಿಯ ಗರಿಷ್ಠ ಮಿತಿಯನ್ನು ಶೇಕಡಾ 50ಕ್ಕೆ ನಿಗದಿಪಡಿಸಿದ್ದ 1992 ರ ಮಂಡಲ್ ತೀರ್ಪಿನ ಪುನರ್ ಪರಿಶೀಲನಾ ಮನವಿಯನ್ನು ತಿರಸ್ಕರಿಸಿತು.
ವಿಶೇಷ ಸಂದರ್ಭಗಳಲ್ಲಿ ಮೀಸಲಾತಿಯ ಪ್ರಮಾಣವನ್ನು ಶೇಕಡಾ 50ಕ್ಕಿಂತ ಹೆಚ್ಚಿಸಲು ರಾಜ್ಯಗಳಿಗೆ ಅನುಮತಿ ನೀಡಬೇಕು, ಮಂಡಲ್ ಆದೇಶದ ಮರುಪರಿಶೀಲನೆಯನ್ನು ದೊಡ್ಡ ಪೀಠಕ್ಕೆ ವರ್ಗಾಯಿಸಬೇಕು ಎಂಬ ಮನವಿಯನ್ನೂ ಪೀಠ ತಿರಸ್ಕರಿಸಿತು.



Join Whatsapp