ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

Prasthutha|

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ದಕ್ಷಿಣ ಠಾಣೆ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

- Advertisement -

ವೆಲೆನ್ಸಿಯಾ, ಗೋರಿಗುಡ್ಡೆಯ ಪ್ರಜ್ವಲ್ ಫಿನ್ಹಾನ್ (26), ಸಕಲೇಶಪುರದ ಧ್ರುವ ಶೆಟ್ಟಿ(19) ಮತ್ತು ಕುಳಾಯಿಯ ಶಿವಾನಿ (22) ಬಂಧಿತ ಆರೋಪಿಗಳು. ಬಂಧಿತರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರೆನ್ನಲಾಗಿದೆ.

ಬಂಧಿತರಿಂದ ಸುಮಾರು 1,40,000 ರೂ. ಮೌಲ್ಯದ 5 ಕೆಜಿ 400 ಗ್ರಾಂ ಗಾಂಜಾ ಹಾಗೂ 4 ಮೊಬೈಲ್ ಫೋನ್ ಗಳನ್ನು ಮತ್ತು 1 ಟ್ಯಾಬ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

- Advertisement -

ಆರೋಪಿ ಪ್ರಜ್ವಲ್ ಮಹಾರಾಷ್ಟ್ರದಿಂದ ಗಾಂಜಾವನ್ನು ಖರೀದಿ ಮಾಡಿಕೊಂಡು ಬಂದು ಮಂಗಳೂರಿನಲ್ಲಿ ಆತನ ಸ್ನೇಹಿತರಾದ ಧ್ರುವ ಶೆಟ್ಟಿ ಮತ್ತು ಶಿವಾನಿ ಅವರಿಗೆ ನೀಡಿ ಅವರ ಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ರಾಜೇಂದ್ರ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪಿಎಸ್‌ಐ ಶೀತಲ್ ಅಲಗೂರು, ಪಿಎಸ್‌ಐ ಜ್ಯೋತಿ ಹಾಗೂ ಠಾಣೆಯ ಸಿಬ್ಬಂದಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Join Whatsapp