ಕಲ್ಲಿಕೋಟೆ: ಕಟ್ಟಡ ಕುಸಿದು ಬಿದ್ದು 20 ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಮರ್ಕಝ್ ನಾಲೆಡ್ಜ್ ಸಿಟಿಯಲ್ಲಿ ನಡೆದಿದೆ.
- Advertisement -
ಕಟ್ಟಡ ಕುಸಿತದಿಂದಾಗಿ ಗಂಭೀರ ಗಾಯಗೊಂಡ ಕಾರ್ಮಿಕರನ್ನು ಕಲ್ಲಿಕೋಟೆ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.