ದಾಂಪತ್ಯ ಜೀವನಕ್ಕೆ ಕಾಲಿಟ್ಟ ನೊಬೆಲ್ ಪುರಸ್ಕೃತೆ ಮಲಾಲಾ ಯೂಸೂಫ್

Prasthutha|

ನವದೆಹಲಿ : ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ, ಪಾಕಿಸ್ತಾನದ ಹೋರಾಟಗಾರ್ತಿ, ಮಲಾಲ ಯೂಸೂಫ್ ಮದುವೆಯಾಗಿದ್ದಾರೆ‌. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.

- Advertisement -

ತಮ್ಮ ಮದುವೆ ಸಂಬ್ರಮದ ಫೋಟೋಗಳನ್ನು ಶೇರ್ ಮಾಡಿರುವ ಮಲಾಲಾ, ಇಂದು ನನ್ನ ಜೀವನದಲ್ಲಿ ಅಮೂಲ್ಯವಾದ ದಿನವಾಗಿದೆ. ಅಸ್ಸರ್ ಮತ್ತು ನಾನು ನಮ್ಮ ಜೀವನದ ಪಾಲುದಾರರಾಗಿದ್ದೇವೆ. ನಾವು ನಮ್ಮ ಕುಟುಂಬಗಳೊಂದಿಗೆ ಬರ್ಮಿಂಗ್‌ ಹ್ಯಾಮ್‌ ನಲ್ಲಿರುವ ಮನೆಯಲ್ಲಿ ನಿಖಾ ಸಮಾರಂಭವನ್ನು ಆಚರಿಸಿದ್ದೇವೆ. ದಯವಿಟ್ಟು ನಿಮ್ಮ ಪ್ರಾರ್ಥನೆಗಳನ್ನು ನಮಗೆ ಕಳುಹಿಸಿ. ಮುಂದಿನ ಪ್ರಯಾಣಕ್ಕಾಗಿ ನಾವು ಒಟ್ಟಿಗೆ ನಡೆಯಲು ಉತ್ಸುಕರಾಗಿದ್ದೇವೆ ಎಂದು ಬರೆದಿದ್ದಾರೆ.



Join Whatsapp