ಮಸ್ಕಿ ವಿಧಾನಸಭೆ ಉಪಚುನಾವಣೆ | ಸೋಲಿನ ಹತಾಷೆಯಿಂದ ಹೊರ ನಡೆದ ಬಿಜೆಪಿ ಅಭ್ಯರ್ಥಿ!

Prasthutha|

ರಾಯಚೂರು : ಜಿದ್ದಾ ಜಿದ್ದಿ ಹಣಾ ಹಣಿಗೆ ಸಾಕ್ಷಿಯಗಿದ್ದ ಮಸ್ಕಿ ವಿಧಾನಸಭೆ ಚುನಾವಣೆಯ ಫಲಿತಾಂಶದ ಮತ ಎಣಿಕೆ ನಡೆಯುತ್ತಿದ್ದು, ಮತ ಎಣಿಕೆಯ 16 ಸುತ್ತುಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಸೋಲಿನ ಹತಾಷೆಯಿಂದ ಹೊರ ನಡೆದಿದ್ದಾರೆ.

ಮಸ್ಕಿಯಲ್ಲಿ ನಾನು ಸೋಲುವುದಿಲ್ಲ ಎಂದು ಭಾವಿಸಿದ್ದೆ. ಆದ್ರೆ ಜನ ಹೊಸಬರನ್ನು ಬಯಸಿದ್ದಾರೆ. ಜನ ಕ್ಷೇತ್ರದಲ್ಲಿ ಬದಲಾವಣೆ ಬಯಸಿ ಮತ ಹಾಕಿದ್ದಾರೆ ಎಂದು ಸುದ್ದಿಗಾರರೊಂದಿಗೆ ಪ್ರತಾಪಗೌಡ ಪಾಟೀಲ್ ಹೇಳಿದ್ದಾರೆ.

- Advertisement -

ಪ್ರತಿ ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ಸೋಲಿನ ಭೀತಿ ಎದುರಾಗಿದೆ.

- Advertisement -