ಶಾಲಾ -ಕಾಲೇಜು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ

Prasthutha|

►ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

- Advertisement -


ಬೆಂಗಳೂರು: ಚೀನಾ, ಅಮೆರಿಕ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊರೋನಾ ವೈರಸ್ ಪ್ರಕರಣಗಳು ದಿಢೀರ್ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂಜಾಗೃತಾ ಕ್ರಮವಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ.


ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಶಾಲಾ- ಕಾಲೇಜು, ಸಿನಿಮಾ ಹಾಲ್, ಬಸ್ , ರೈಲು, ವಿಮಾನ ಸೇರಿ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ನೂತನ ವರ್ಷಾಚರಣೆ 31 ರ ರಾತ್ರಿ 1 ಗಂಟೆವರೆಗೆ ಮಾತ್ರ ಅವಕಾಶವಿರುತ್ತದೆ. ಎಲ್ಲರೂ ನಿಯಮವನ್ನು ಪಾಲಿಸಬೇಕು ಎಂದು ಹೇಳಿದ್ದಾರೆ.

- Advertisement -


ಇನ್ನು ಆರೋಗ್ಯ ಸಚಿವ ಡಾ.ಸುಧಾಕರ್ ಮಾತನಾಡಿ, ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಕಡ್ಡಾಯವಾಗಿರುತ್ತದೆ. ನೂತನ ವರ್ಷಾಚರಣೆ ಹೊಟೇಲ್ ರೆಸಾರ್ಟ್ ರೆಸ್ಟೋರೆಂಟ್’ಗಳಲ್ಲೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿಲ್ಲ ಎಂದು ಹೇಳಿದ್ದಾರೆ.



Join Whatsapp