Home ಗಲ್ಫ್ ಸೌದಿಯಲ್ಲಿ ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಿಲ್ಲ !

ಸೌದಿಯಲ್ಲಿ ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಿಲ್ಲ !

ರಿಯಾದ್ : ಕೊರೋನ ವೈರಸ್ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಈ ಹಿಂದೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಸಡಿಲಿಸುವುದಾಗಿ ಸೌದಿ ಅರೇಬಿಯಾ ಶುಕ್ರವಾರ ಘೋಷಿಸಿದೆ.ಅಕ್ಟೋಬರ್ 17 ರಿಂದ ಜನರು ತೆರೆದ ಸ್ಥಳಗಳಲ್ಲಿ ಮಾಸ್ಕ್ ಧರಿಸುವ ಅಗತ್ಯವಿಲ್ಲ ಆದರೆ ಒಳಾಂಗಣದಲ್ಲಿ ಮಾಸ್ಕ್ ಧರಿಸುವ ಈ ಹಿಂದಿನ ನಿಯಮದಲ್ಲಿ ಬದಲಾವಣೆಯಾಗಿಲ್ಲ ಎಂದು ಆಂತರಿಕ ಸಚಿವಾಲಯದ ಮೂಲವನ್ನು ಉಲ್ಲೇಖಿಸಿ ರಾಜ್ಯ ಸುದ್ದಿ ಸಂಸ್ಥೆ SPA ವರದಿ ಮಾಡಿದೆ.

ಮಸ್ಜಿದುಲ್ ಹರಂ ಮತ್ತು ಮಸ್ಜಿದುನ್ನಬವಿ ಎರಡು ಡೋಸ್ ಲಸಿಕೆ ಪಡೆದವರಿಗೆ ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ.ಆದರೆ ಕೆಲಸಗಾರರು ಮತ್ತು ಸಂದರ್ಶಕರು ಸದಾ ಸಮಯ ಮಾಸ್ಕ್ ಧರಿಸಿರಬೇಕು. ಸಾಮಾಜಿಕ ಅಂತರ ಅಗತ್ಯವಿಲ್ಲ. ಸಂಗಮಿಸಲು ಅನುಮತಿಸಲಾಗುವುದು. ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಸಾರಿಗೆ, ರೆಸ್ಟೋರೆಂಟ್‌ಗಳು ಮತ್ತು ಚಿತ್ರಮಂದಿರಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದ್ದು ಸೌದಿ ಅರೇಬಿಯಾ ಸಹಜ ಸ್ಥಿತಿಯತ್ತ ಮರಳುತ್ತಿದೆ.

Join Whatsapp
Exit mobile version