Home ಟಾಪ್ ಸುದ್ದಿಗಳು ಮಸೂದ್ ಗುಂಪು ಹತ್ಯೆಗೆ ಸುಳ್ಯ ಮುಸ್ಲಿಂ ಒಕ್ಕೂಟ ಖಂಡನೆ

ಮಸೂದ್ ಗುಂಪು ಹತ್ಯೆಗೆ ಸುಳ್ಯ ಮುಸ್ಲಿಂ ಒಕ್ಕೂಟ ಖಂಡನೆ

ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ, ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆಗ್ರಹ

ಸುಳ್ಯ: ಕಳಂಜ ಗ್ರಾಮದಲ್ಲಿ ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿ ಮಸೂದ್ ಎಂಬ ಯುವಕನನ್ನು ಸುಮಾರು ಎಂಟು ಮಂದಿಯ ತಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಯುವಕ ಮೃತಪಟ್ಟಿದ್ದು, ಘಟನೆಗೆ ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟದ ವತಿಯಿಂದ ತೀವ್ರ ಖಂಡನೆಯನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಎಂಟು ಮಂದಿ ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ತಕ್ಷಣವೇ ಬಂಧಿಸಿದ್ದಾರೆ. ಪೊಲೀಸ್ ಇಲಾಖೆಯ ಈ ಕಾರ್ಯವನ್ನು ಸಂಘಟನೆಯಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದೇವೆ.

ಅದೇ ರೀತಿ ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಒಕ್ಕೂಟದ ವತಿಯಿಂದ ಸಂಚಾಲಕ ಇಕ್ಬಾಲ್ ಎಲಿಮಲೆ ತಾಲೂಕು ಮಸೀದಿ ಸಮನ್ವಯ ಸಮಿತಿ ಸಂಚಾಲಕರಾದ ಹಾಜಿ ಕೆ.ಎಂ. ಮುಸ್ತಫ ಜನತಾ. ಮುಸ್ಲಿಮ್ ಒಕ್ಕೂಟದ ಸಹ ಸಂಚಾಲಕರಾದ ಕೆ.ಎಸ್. ಉಮಾರ್ . ಒಕ್ಕೂಟದ ಮುಖಂಡರಾದ ಹಾಜಿ ಇಬ್ರಾಹಿಂ ಕತ್ತರ್ ಮಂಡೆಕೋಲು. ಕೆ.ಬಿ. ಅಬ್ದುಲ್ ಮಜೀದ್ ಆಗ್ರಹಿಸಿದ್ದಾರೆ. ಅದೇ ರೀತಿ ಮೃತ ವ್ಯಕ್ತಿಯ ಕುಟುಂಬಕ್ಕೆ ಸರಕಾರ 25 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸುವಂತೆ ಅವರು ಅಗ್ರಹಿಸಿದ್ದಾರೆ.

Join Whatsapp
Exit mobile version