ಮನೆಯಲ್ಲಿ ಸಾಮೂಹಿಕ ನಮಾಝ್: ಪ್ರಕರಣದಲ್ಲಿ ಹುರುಳಿಲ್ಲ ಎಂದು ಕೇಸ್ ರದ್ದು ಮಾಡಿದ ಪೊಲೀಸರು

Prasthutha|

ಲಕ್ನೋ: ಮನೆಯೊಂದರಲ್ಲಿ ಸಾಮೂಹಿಕ ನಮಾಝ್ ಮಾಡಿದ್ದ ಕಾರಣಕ್ಕೆ ದಾಖಲಿಸಿದ್ದ ಪ್ರಕರಣವನ್ನು ಉತ್ತರ ಪ್ರದೇಶ ಪೊಲೀಸರು ರದ್ದುಗೊಳಿಸಿದ್ದಾರೆ.
ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ತಿಳಿಯಿತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

- Advertisement -

ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ದುಲೇಪುರ್ ಗ್ರಾಮದಲ್ಲಿ ಆಗಸ್ಟ್ 24 ರಂದು 26 ಮುಸ್ಲಿಮರ ವಿರುದ್ಧ ಸಾಮೂಹಿಕ ನಮಾಝ್ ಮಾಡಿದ ಕಾರಣಕ್ಕೆ ಎಫ್ ಐಆರ್ ದಾಖಲಾಗಿತ್ತು.
ನೆರೆಹೊರೆಯವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505-2ರಡಿಯಲ್ಲಿ ನಮಾಝ್ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಪ್ರಾರ್ಥನೆ ಸಲ್ಲಿಸಿದ್ದಕ್ಕೂ ಪ್ರಕರಣ ದಾಖಲಿಸಿದ್ದರಿಂದ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಸಹಿತ ಹಲವು ಗಣ್ಯರು ಕೂಡ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು.

- Advertisement -

ಇಂದು ಮೊರಾದಾಬಾದ್ ಪೊಲೀಸರು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ, ನಮಾಝ್ ಮಾಡಿದ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಆದ್ದರಿಂದ ಪ್ರಕರಣ ಕೈಬಿಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.



Join Whatsapp