ಚಿಕ್ಕಮಗಳೂರು: ರಾಜಕಾರಣಿಗಳು ಸರಿಯಾಗಿ ಮೂಲಭೂತ ಸೌಕರ್ಯ ಒದಗಿಸಿಕೊಟ್ಟಿಲ್ಲ ಎಂದು ಮೂರೂ ಪಕ್ಷಗಳ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡಿದ ಘಟನೆ ಜಿಲ್ಲೆಯ ಯಡಗುರು ಎಂಬಲ್ಲಿನಡೆದಿದೆ.
ಪ್ರವಾಹದಿಂದ ಹಾನಿಗೀಡಾದ ರಸ್ತೆಗಳನ್ನು ದುರಸ್ತಿ ಮಾಡದೇ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ನಮ್ಮಿಂದ ಜನರಿಗೆ ಉತ್ತರ ನೀಡಲು ಸಾಧ್ಯವಾಗುತ್ತಿಲ್ಲ ಎಂದು 450ಕ್ಕೂ ಹೆಚ್ಚು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನ ಕಾರ್ಯಕರ್ತರು ಸಾಮೂಹಿಕವಾಗಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸದಂತೆ ಹಾಗೂ ಯಾವುದೇ ರಾಜಕೀಯ ನಾಯಕರನ್ನು ಗ್ರಾಮದೊಳಗೆ ಬರಲು ಬಿಡಬಾರದು ಎಂದು ಕೂಡ ಗ್ರಾಮಸ್ಥರು ನಿರ್ಧರಿಸಿದ್ದಾರೆ.