ಚಾಂದನಿ ಚೌಕ್ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ: ಮುಂದುವರಿದ ಕಾರ್ಯಾಚರಣೆ

ನವದೆಹಲಿ: ರಾಷ್ಟ್ರ ರಾಜಧಾನಿಯ ಚಾಂದನಿ ಚೌಕ್ ನ ಭಗೀರಥ ಪ್ಯಾಲೇಸ್ ಪ್ರದೇಶದಲ್ಲಿರುವ ಹೋಲ್ಸೇಲ್ ಮಾರ್ಕೆಟ್‌ನಲ್ಲಿ ಗುರುವಾರ ಸಂಜೆ  ಉಂಟಾದ ಅಗ್ನಿ ಅವಘಡವು ಶುಕ್ರವಾರವೂ ಉರಿಯುತ್ತಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹ ಸಪಡುತ್ತಿದ್ದಾರೆ.

ಈವರೆಗೆ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. 30ರಷ್ಟು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು, ಬೆಂಕಿಯನ್ನು ನಂದಿಸುವ ಪ್ರಯತ್ನಗಳು ನಡೆಯುತ್ತಿವೆ.  ಶುಕ್ರವಾರ ಬೆಳಿಗ್ಗೆಯೂ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ.

- Advertisement -

ಅಂಗಡಿಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ ಮಾರುಕಟ್ಟೆಯ ಇತರ ಅಂಗಡಿಗಳಿಗೂ ವ್ಯಾಪಿಸಿದೆ ಎನ್ನಲಾಗಿದ್ದು, ಇಲ್ಲಿಯವರೆಗೆ ಬೆಂಕಿ ಹತೋಟಿಗೆ ಬಂದಿಲ್ಲ. ಬೆಂಕಿ ಅವಘಡದ ಹಿಂದಿನ ಕಾರಣ ತಿಳಿದು ಬಂದಿಲ್ಲ ಎಂದು ಮಾಜಿ ಆರೋಗ್ಯ ಸಚಿವ ಡಾ. ಹರ್ಷವರ್ಧನ ತಿಳಿಸಿದ್ದಾರೆ.