ಗುಜರಾತ್ | ಪೊಲೀಸ್ ಠಾಣೆಯ ಪಾರ್ಕಿಂಗ್ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ : 25ಕ್ಕೂ ಹೆಚ್ಚು ವಾಹನಗಳು ಭಸ್ಮ

Prasthutha|

ಗುಜರಾತ್ : ಗುಜರಾತ್ ನ ಖೇಡಾ ಟೌನ್ ಪೊಲೀಸ್ ಠಾಣೆಯ ಪಾರ್ಕಿಂಗ್ ಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ ಬೈಕ್, ಕಾರು, ಆಟೋ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ. ಗುಜರಾತ್ ನ ಖೇಡಾ ಜಿಲ್ಲೆಯ ಖೇಡಾ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

ಸುಟ್ಟು ಹೋದ ವಾಹನಗಳ ಪೈಕಿ ಹಲವು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದ ವಾಹನಗಳಾಗಿದ್ದು, ಕೆಲವು ವಾಹನಗಳು ಪೊಲೀಸರಿಗೆ ಸೇರಿದ್ದಾಗಿವೆ ಎಂದು ಹೇಳಲಾಗಿದೆ. ಪ್ರಸ್ತುತ ಐದಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ಖೇಡಾ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಪ್ರಾರಂಭಿಸಿದ್ದಾರೆ

Join Whatsapp