ಚಿಕ್ಕಮಗಳೂರು: ಕಳೆದ ನಾಲ್ಕು ದಿನಗಳ ಹಿಂದೆ ಚಾರ್ಮಾಡಿ ಘಾಟಿಯ ಬಿದಿರುತಳ ಗ್ರಾಮದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು. 500ಕ್ಕೂ ಅಧಿಕ ಅರಣ್ಯ ಪ್ರದೇಶ ಕಾಡ್ಗಿಚ್ಚಿಗೆ ಭಸ್ಮವಾಗಿತ್ತು.
ಶುಕ್ರವಾರ ರಾತ್ರಿಯಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಗಾಳಿಯ ವೇಗಕ್ಕೆ ಬೆಂಕಿ ಹೆಚ್ಚುತ್ತಲಿದ್ದು, ಇನ್ನಷ್ಟು ಪ್ರದೇಶಕ್ಕೆ ವ್ಯಾಪಿಸುತ್ತಿದೆ. ಕಾಡ್ಗಿಚ್ಚು ನಿಯಂತ್ರಿಸಲು ಅರಣ್ಯ ಇಲಾಖೆ, ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯದಲ್ಲಿ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ. ಸ್ಥಳೀಯರಲ್ಲಿ ಆತಂಕ ವ್ಯಕ್ತವಾಗಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಪಟ್ಟಿದ್ದಾರೆ.
ಬೆಂಕಿಯ ಕೆನ್ನಾಲಿಗೆ 10 ಕಿ.ಲೋ ಮೀಟರ್ ದೂರಕ್ಕೂ ಕಾಣಿಸುತ್ತಿದೆ. ಅಗ್ನಿ ಅವಘಡ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.