►ವಾಹನ ಸಂಚಾರ ಸಂಪೂರ್ಣ ಬಂದ್
ಹಾಸನ: ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.
ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ. ಸತತ ಮಳೆಯಿಂದ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ.
ಸದ್ಯ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಬರುತ್ತಿರುವ ವಾಹನಗಳನ್ನು ಗುಂಡ್ಯದಲ್ಲೇ ಪೊಲೀಸರು ತಡೆಯುತ್ತಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಮಣ್ಣು ತೆರವು ಮಾಡಿದ ನಂತರ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಇದೀಗ ಮತ್ತೆ ಭೂಕುಸಿತ ಸಂಭವಿಸಿದ್ದು, ಸಂಚಾರ ಸ್ಥಗಿತಗೊಂಡಿದೆ.