ಕಾಂಗ್ರೆಸ್ ಸರ್ಕಾರದ ವಿರುದ್ಧ ಆ. 23ರಂದು ಬೃಹತ್ ಪ್ರತಿಭಟನೆ: ಬೊಮ್ಮಾಯಿ

Prasthutha|

ಬೆಂಗಳೂರು: ಗುತ್ತಿಗೆದಾರರ ಕಮಿಷನ್, ವರ್ಗಾವಣೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -


ಶನಿವಾರ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಸರ್ಕಾರ ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಕಾಂಗ್ರೆಸ್ನ ಪಂಚ ಯೋಜನೆಗಳು ಕೇವಲ ಹೆಸರಿಗೆ ಮಾತ್ರ. ಕೊಟ್ಟ ಭರವಸೆಯನ್ನು ಈಡೇರಿಸಲು ಅವರಿಂದ ಸ್ಯಾಧ್ಯವಾಗಿಲ್ಲ ಎಂದು ಹೇಳಿದರು.


ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ಬೇಸತ್ತು ಹೋಗಿದ್ದಾರೆ. ತಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯವನ್ನು ಆರ್ಥಿಕವಾಗಿ ಹಿಂದಕ್ಕೆ ಕೊಂಡೊಯ್ಯುತ್ತಿದ್ದಾರೆ. ಪ್ರಮುಖವಾಗಿ ಈ ಸರ್ಕಾರದಲ್ಲಿ ಡಿಕ್ಟೇಟರ್ ಶಿಪ್ ನಡವಳಿಕೆ ಎದ್ದು ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ.

Join Whatsapp