ಜೂ. 28ರಂದು ಬೆಂಗಳೂರಿನ ರಿಸರ್ವ್ ಬ್ಯಾಂಕ್ ಕಚೇರಿಯ ಎದುರು ರೈತರ ಬೃಹತ್ ಪ್ರತಿಭಟನೆ

Prasthutha|

ಬೆಂಗಳೂರು: ರೈತರಿಗೆ ಸಂಬಂಧಿಸಿ ವಿವಿಧ ಬೇಡಿಕೆಗಳ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಆದ್ದರಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೂ.28ರಂದು ಬೆಂಗಳೂರಿನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ ಕಚೇರಿಯ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

- Advertisement -


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು ಒತ್ತಾಯಿಸಿ ರೈತರು ಕೃಷಿ ಚಟುವಟಿಕೆ ನಡೆಸಲು ಬ್ಯಾಂಕ್ ನಲ್ಲಿ ಸಾಲ ಕೇಳಲು ಹೋದಾಗ ಸಾಲಗಾರರ ಸಿಬಿಲ್ ಪರೀಕ್ಷೆ ಮಾಡಿ ನಂತರ ಸಾಲ ಕೊಡಬೇಕೇ ಬೇಡವೆ ಎಂದು ತಿಳಿಸುತ್ತೇವೆ ಎನ್ನುತ್ತಾರೆ. ಇದರಿಂದ ಬಹುತೇಕ ರೈತರಿಗೆ ಸಾಲ ಸಿಗುತ್ತಿಲ್ಲ. ರೈತ ದೇಶದ ಜನರಿಗೆ ಆಹಾರ ಉತ್ಪಾದನೆ ಮಾಡುವ ಸಲುವಾಗಿ ಬೆಳೆ ಬೆಳೆಯಲು, ವ್ಯವಸಾಯ ಚಟುವಟಿಕೆಗಾಗಿ ಸಾಲ ತೆಗೆದುಕೊಳ್ಳುತ್ತಾನೆ. ಕೆಲವು ಸಂದರ್ಭ ಪ್ರಕೃತಿಯ ವಕ್ರದೃಷ್ಟಿಯಿಂದ ಅತಿವೃಷ್ಟಿ, ಅನಾವೃಷ್ಟಿ, ಪ್ರವಾಹ ಹಾನಿ, ಬರಹಾನಿ ಸಿಲುಕಿ ಬೆಳೆ ನಷ್ಟ ಅನುಭವಿಸುತ್ತಾನೆ. ಇದರಿಂದ ಕೆಲವು ಸಂದರ್ಭಗಳಲ್ಲಿ ನಿಯಮಗಳ ಪ್ರಕಾರ ಸಕಾಲಕ್ಕೆ ಸಾಲ ಪಾವತಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ರೈತನ ಸಿಬಿಲ್ ಸ್ಕೋರ್ ಉತ್ತಮವಾಗಿರಲು ಸಾಧ್ಯವಾಗುವುದಿಲ್ಲ. ಎಲ್ಲ ವಿಷಯಗಳನ್ನು ಗಮನಿಸಿ ರೈತರ ಕೃಷಿ ಚಟುವಟಿಕೆಗೆ ನೀಡುವ ಸಾಲಕ್ಕೆ ಸಿಬಿಲ್ ಸ್ಕೋರ್ ತಾಳೆ ಹಾಕುವ ಪದ್ಧತಿಯನ್ನು ರದ್ದು ಪಡಿಸಬೇಕು. ಎಂದು ತಿಳಿಸಿದರು


ರೈತರು ಬ್ಯಾಂಕುಗಳಲ್ಲಿ ಸಾಲ ತೆಗೆದುಕೊಂಡು 12 ತಿಂಗಳ ಅವಧಿಯೊಳಗೆ ಸಾಲದ ಮೇಲಿನ ಬಡ್ಡಿ ಪಾವತಿಸಿದರು ಕೊರೋನಾ ಸಂಕಷ್ಟದಲ್ಲಿರುವ ರೈತರಿಗೆ ಬ್ಯಾಂಕುಗಳು ಸಾಲವನ್ನು ನವೀಕರಿಸುತ್ತಿಲ್ಲ. ಸಾಲದ ಹಣ ಸಂಪೂರ್ಣವಾಗಿ ತುಂಬಿ ಹೊಸದಾಗಿ ಸಾಲ ಪಡೆಯಬೇಕೆಂದು ಹೇಳುತ್ತಿದ್ದಾರೆ. ಇದು ರೈತರಿಗೆ ಸಂಕಷ್ಟವನ್ನು ಉಂಟು ಮಾಡಿದೆ ಈ ಬಗ್ಗೆ ನಿಯಮವನ್ನು ತಿದ್ದುಪಡಿ ಮಾಡಿ ನವೀಕರಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.
ರೈತರ ಕೃಷಿ ಭೂಮಿಯ ಮೌಲ್ಯವನ್ನು ಆಧರಿಸಿ ಕಾರು ಮೋಟಾರ್ ಬೈಕ್ ಮನೆಕಟ್ಟಲು ಸಾಲ ನೀಡುವ ರೀತಿ ಶೇಕಡ 70ರಷ್ಟು ಸಾಲ ಕೊಡುವ ಪದ್ಧತಿಯನ್ನು ಜಾರಿಗೆ ತರಬೇಕು. ಇದರಿಂದ ಅನೇಕ ರೈತರ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ. ನೆಮ್ಮದಿಯಾಗಿ ಕೃಷಿ ಚಟುವಟಿಕೆ ಮಾಡಲು ಅನುಕೂಲವಾಗುತ್ತದೆ. ಕೊರೋನಾ ಸಂಕಷ್ಟದಿಂದ ರೈತರು ಕಷ್ಟ ಅನುಭವಿಸುತ್ತಿದ್ದರೂ ರೈತರಿಗೆ ಪ್ರೋತ್ಸಾಹದಾಯಕ ಯಾವುದೇ ಯೋಜನೆ ಜಾರಿ ಮಾಡಿಲ್ಲ. ಕೆಲವೇ ಬ್ಯಾಂಕುಗಳು ಒಟಿಎಸ್ ಮೂಲಕ ಸಾಲ ತಿರುವಳಿ ಮಾಡುತ್ತಿದ್ದಾರೆ. ಹೊಸ ಸಾಲ ಕೊಡುತ್ತಿಲ್ಲ, ಆದರೆ ಉದ್ಯಮಿಗಳಿಗೆ ಇರುವ ಸಾಲದ ಜೊತೆಗೆ ಶೇಕಡ 30ರಷ್ಟು ಹೆಚ್ಚುವರಿ ಸಾಲ ಪಡೆದುಕೊಂಡು ವ್ಯಾಪಾರ ಅಭಿವೃದ್ಧಿಪಡಿಸಲು ಪ್ರೋತ್ಸಾಹ ನೀಡಲಾಗಿದೆ ಇಂತಹ ನೀತಿ ರೈತರನ್ನು ನಿರ್ಲಕ್ಷಿಸುವ ನೀತಿ ಗಳಾಗಿವೆ, ಸಂಕಷ್ಟದಲ್ಲಿರುವ ರೈತರ ಸಾಲ ವಸೂಲಾತಿಗಾಗಿ ಬ್ಯಾಂಕ್ ಗಳು ನೋಟಿಸ್ ನೀಡಿ ಕಿರುಕುಳ ನೀಡುತ್ತಿವೆ ಹಾಗೂ ನ್ಯಾಯಾಲಯಕ್ಕೆ ದಾವೆ ದಾಖಲಿಸುತ್ತೇವೆ ಇದು ಕೂಡಲೇ ನಿಲ್ಲಬೇಕು ಎಂದು ಅವರು ಆರೋಪಿಸಿದರು.

- Advertisement -


ಸರ್ಕಾರಿ ಯೋಜನೆಗಳ ಪ್ರೋತ್ಸಾಹಧನ ಹಣ ಕಿಸಾನ್ ಸಮ್ಮಾನ್ ಹಣ ಹಾಲು ಮಾರಾಟ ಮಾಡಿದ ಹಣ ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವುದನ್ನು ತಪ್ಪಿಸಬೇಕು. ಆನ್ ಲೈನ್ ಹಣ ಪಾವತಿ, ರೈತರ ಖಾತೆಯಿಂದ ಅನಾಮಧೇಯರು ಹಣ ವಂಚಿಸುತ್ತಿರುವ ಬಗ್ಗೆ ಜಿಲ್ಲಾಮಟ್ಟದಲ್ಲಿ ತನಿಖಾ ತಂಡ ರಚಿಸಿ ವಂಚಕರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ ತಕ್ಷಣವೇ ನ್ಯಾಯ ಹಣ ಕಳೆದುಕೊಂಡವರಿಗೆ ತಕ್ಷಣವೇ ಹಣ ವಾಪಸ್ ಕೊಡಿಸುವ ನೀತಿ ರೂಪಿಸಬೇಕು ಪ್ರತಿವರ್ಷ ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿ ಸಭೆ ನಡೆಸಿ ಕೃಷಿ ಚಟುವಟಿಕೆ ನಡೆಸುವ ಬೆಳೆಗಳಿಗೆ ಬೆಳೆ ಸಾಲ
ನೀಡಲು ನಿಯಮಗಳನ್ನು ರಚಿಸುತ್ತದೆ. ಇಂತಹ ಸಭೆ ನಡೆಸುವ ಸಂದರ್ಭದಲ್ಲಿಯೂ ರೈತರ ಸಮಸ್ಯೆಗಳನ್ನು ಅರಿತಿರುವ ರೈತ ಪ್ರತಿನಿಧಿಗಳನ್ನು ಕರೆದು ಚರ್ಚಿಸದೆ ರೈತರ ಸಮಸ್ಯೆಗಳನ್ನು ಅರಿಯದ ಅಧಿಕಾರಿಗಳು ನಿರ್ಧಾರ ಮಾಡುವುದು ಸರಿಯಾದ ಕ್ರಮ ಅಲ್ಲ. ಇನ್ನು ಮುಂದಾದರೂ ರೈತ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸಿ ಸಮಸ್ಯೆಗಳನ್ನು ಅರಿತು ತೀರ್ಮಾನ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ ಎಂದು ಅವರು ಹೇಳಿದರು.
ಲೋಕಸಭಾ ವಿಧಾನಸಭಾ ಕ್ಷೇತ್ರಗಳಲ್ಲಿ ಒಬ್ಬ ವ್ಯಕ್ತಿ ಒಂದೇ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಬೇಕು ಎಂಬ ನಿಯಮ ಚುನಾಯಿತ ಪ್ರತಿನಿಧಿಯಾಗಿ ಅನವಶ್ಯಕವಾಗಿ ಪಕ್ಷಾಂತರ ಮಾಡುವ ಉದ್ದೇಶದಿಂದ ರಾಜೀನಾಮೆ ನೀಡುವ ಜನಪ್ರತಿನಿಧಿಯನ್ನು 10 ವರ್ಷ ಕಾಲ ಚುನಾವಣೆಗೆ ಸ್ಪರ್ಧೆ ಮಾಡದಂತೆ ತಡೆ ಯಾಗಬೇಕು ಎಂಬ ಚುನಾವಣಾ ಆಯೋಗದ ತೀರ್ಮಾನವನ್ನು ಕೇಂದ್ರ ಸರ್ಕಾರ ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದರು.


ಈ ಎಲ್ಲಾ ವಿಷಯಗಳ ಬಗ್ಗೆ ಆರ್ ಬಿ ಐ ಗೆ ಪತ್ರ ಬರೆಯಲಾಗಿದ್ದರೂ ಯಾವುದೇ ಕ್ರಮ ಜಾರಿಯಾಗಿಲ್ಲ. ಆದ್ದರಿಂದ ರಾಜ್ಯದ ರೈತರು ಆರ್ ಬಿಐ ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ನಿರ್ಲಕ್ಷ ಮಾಡಿದರೆ ನಿರಂತರ ಹೋರಾಟ ಮುಂದುವರಿಸ ಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅತ್ತ ಹಳ್ಳಿ ದೇವರಾಜ್, ಸೋಮಶೇಖರ್ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಕಿರಗಸೂರ್ ಶಂಕರ್,, ಬರಡನಪುರ ನಾಗರಾಜ್, ಅಂಬಳೆ ಮಂಜುನಾಥ್, ಕಾಟೂರ ಮಹದೇವಸ್ವಾಮಿವರಕೂಡು ನಾಗೇಶ್, ಜಯರಾಮೆಗೌಡ ಮತ್ತಿತರರು ಉಪಸ್ಥಿತರಿದ್ದರು.

Join Whatsapp