ನಾಡಿನ ಮಹನಿಯರಿಗೆ ಅವಮಾನ: ಜೂನ್ 18ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

Prasthutha|

ಬೆಂಗಳೂರು: ಪಠ್ಯ ಪುಸ್ತಕದಲ್ಲಿ ನಾಡಿನ ಮಹನಿಯರಿಗೆ ಅವಮಾನ ಮಾಡಿದ ಚಕ್ರತೀರ್ಥನನ್ನು ತಕ್ಷಣವೇ ಬಂಧಿಸಬೇಕು ಹಾಗೂ ಅವರ ಬೆನ್ನಿಗೆ ನಿಂತ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ‘ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ – ಕರ್ನಾಟಕ’ ಜೂನ್ 18ರ ಶನಿವಾರದಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿದೆ.
ಪ್ರತಿಭಟನಾ ಮೆರವಣಿಗೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕೇಂದ್ರ ರೈಲ್ವೇ ನಿಲ್ದಾಣದಿಂದ ಪ್ರಾರಂಭವಾಗಲಿದ್ದು, ಫ್ರೀಡಂ ಪಾರ್ಕ್ ನಲ್ಲಿ ಸಮಾವೇಶಗೊಳ್ಳಲಿದೆ. ಬೃಹತ್ ಹೋರಾಟಕ್ಕೆ ರಾಜ್ಯದ ಎಲ್ಲಾ ಸಮುದಾಯದ ಮಠಗಳ ಸ್ವಾಮೀಜಿಗಳು, ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳು, ದಲಿತ ಸಮುದಾಯದ ಸಂಘಟನೆಗಳು, ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಕೀಲರ ಒಕ್ಕೂಟಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಹೋರಾಟ ಸಮಿತಿಯ ಸಂಚಾಲಕರು ಹೇಳಿದ್ದಾರೆ.

Join Whatsapp