ಮಂಗಳೂರು: ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಏಪ್ರಿಲ್ 18ರಂದು ಮಂಗಳೂರಿನಲ್ಲಿ ಬೃಹತ್ ವಕ್ಫ್ ಸಂರಕ್ಷಣಾ ಪ್ರತಿಭಟನೆ ನಡೆಯಲಿದೆ ಎಂದು ಉಡುಪಿ ಸಂಯುಕ್ತ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದ್ ಹೇಳಿದ್ದಾರೆ.
ಕೇಂದ್ರ ಸರ್ಕಾರದ ವಕ್ಫ್ ಕಾಯ್ದೆ ಯಿಂದ ಭಾರತೀಯ ಮುಸ್ಲಿಮರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿಭಟನೆ ಮೂಲಕ ಕಾಯ್ದೆ ಹಿಂಪಡೆಯುವಂತೆ ಮಾಡುವುದು ನಮ್ಮ ಕರ್ತವ್ಯ. ಅದರಿಂದ ವಕ್ಫ್ ಕಾಯ್ದೆ ವಿರೋಧಿಸಿ ಏಪ್ರಿಲ್ 18ರ ಸಂಜೆ 3 ಗಂಟೆಗೆ ಮಂಗಳೂರಿನ ಅಡ್ಯಾರ್ ಕಣ್ಣೂರು ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆ ಯಶಸ್ವಿಗೊಳಿಸಲು ಮಸೀದಿಗಳಲ್ಲಿ ಉಸ್ತಾದರು ಹಾಗೂ ಖತೀಬರು ಈ ಬಗ್ಗೆ ಮಾಹಿತಿ ನೀಡಬೇಕು ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
ವಕ್ಫ್ ಕಾಯ್ದೆ ವಿರುದ್ಧ ಏ.18ರಂದು ನಡೆಯುವ ಬೃಹತ್ ಪ್ರತಿಭಟನೆ ಯಶಸ್ವಿಗೊಳಿಸಲು ಮಸೀದಿಗಳಲ್ಲಿ ಕರೆ ನೀಡಲು ಮನವಿ
ಮಂಗಳೂರು: ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಏಪ್ರಿಲ್ 18ರಂದು ಮಂಗಳೂರಿನ ಅಡ್ಯಾರ್ ಕಣ್ಣೂರು ನಲ್ಲಿ ನಡೆಯುವ ಬೃಹತ್ ಪ್ರತಿಭಟನೆ ಯಶಸ್ವಿಗೊಳಿಸಲು ಮಸೀದಿಗಳಲ್ಲಿ ಕರೆ ನೀಡಲು ಕರ್ನಾಟಕ ಉಲೆಮಾ ಕೋಆರ್ಡಿನೇಷನ್ ಮನವಿ ಮಾಡಿದೆ.
ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ, ಬಹುಮಾನ್ಯ ಖಾಝಿ ಶೈಖುನಾ ತ್ವಾಖಾ ಉಸ್ತಾದ್ ಹಾಗೂ ಬಹುಮಾನ್ಯ ಖಾಝಿ ಶೈಖುನಾ ಮಾಣಿ ಉಸ್ತಾದರ ಮಾರ್ಗದರ್ಶನದಲ್ಲಿ ದಿನಾಂಕ 18 ಏಪ್ರಿಲ್ 2025 ಶುಕ್ರವಾರ ಅಪರಾಹ್ನ 3 ಗಂಟೆಗೆ ಮಂಗಳೂರು ಅಡ್ಯಾರ್ ಕಣ್ಣೂರ್ ಶಾ ಗಾರ್ಡನ್ ನಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿ ಕೊಳ್ಳಲಾಗಿದೆ. ಸದರಿ ಸಮಾವೇಶದಲ್ಲಿ ತಮ್ಮ ಊರಿನಿಂದ ಗರಿಷ್ಠ ಮಟ್ಟದಲ್ಲಿ ಜನರು ಬರುವಂತೆ ಮಾಡಿ ಸಭೆವನ್ನು ಯಶಸ್ವಿ ಗೊಳಿಸಿ ಕೊಡಲು ತಮ್ಮಲ್ಲಿ ವಿನಂತಿಸುತ್ತೇವೆ ಎಂದು ಪ್ರಕಟನೆ ತಿಳಿಸಿದೆ.
