Home ಟಾಪ್ ಸುದ್ದಿಗಳು ಬಾಬಾ ಸಾಹೇಬ್ ಗೆ ಅವಮಾನ ಖಂಡಿಸಿ ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ, ರಸ್ತೆ ತಡೆ

ಬಾಬಾ ಸಾಹೇಬ್ ಗೆ ಅವಮಾನ ಖಂಡಿಸಿ ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ, ರಸ್ತೆ ತಡೆ

ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆದರೆ ಮಾತ್ರ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸುತ್ತೇನೆ ಎಂದು ಪಟ್ಟು ಹಿಡಿದು ಅಂಬೇಡ್ಕರ್ ಫೋಟೋ ತೆಗೆಸಿದ ರಾಯಚೂರಿನ ಜಿಲ್ಲಾ ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಇಂದು ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.


ನಗರದ ಪ್ರಮುಖ ವೃತ್ತಗಳಲ್ಲಿ ಟಯರ್ ಗೆ ಬೆಂಕಿ ಹಚ್ಚಿದ ಪ್ರತಿಭಟನಕಾರರು ಮೆರವಣಿಗೆ ನಡೆಸಿ, ಮಲ್ಲಿಕಾರ್ಜುನ ಗೌಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿಎಸ್ಎಸ್, ಸಿಐಟಿಯು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ರಾಯಚೂರು ನಗರದಲ್ಲಿ ಪೊಲೀಸ್ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಟ್ವೀಟ್ ಮಾಡಿ, ನ್ಯಾಯಾಧೀಶರು ಇಷ್ಟು ಕೀಳು ಮಟ್ಟಕ್ಕೆ ಇಳಿಯುವ ಅಗತ್ಯವಿತ್ತೇ. ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನ ಬರೆಯದಿದ್ದರೆ ಈ ಗಣರಾಜ್ಯೋತ್ಸವವೇ ಇರುತ್ತಿರಲಿಲ್ಲ. ಅದರ ಕಾನೂನುಗಳ ಫಲದಲ್ಲೇ ಅನೇಕರು ನ್ಯಾಯಧೀಶರಾಗಿ ಅದರ ಮಹತ್ವವನ್ನೇ ಮರೆತಿದ್ದಾರೆ. ರಾಯಚೂರು ಜಿಲ್ಲಾ ನ್ಯಾಯಾಧೀಶರನ್ನು ಕೂಡಲೇ ಸೇವೆಯಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Join Whatsapp
Exit mobile version