ಬೆಂಗಳೂರು: ಪಠ್ಯಪರಿಷ್ಕರಣಾ ಸಮಿತಿಯ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಬಂಧಿಸುವಂತೆ ಹಾಗೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆ ಆರಂಭಗೊಂಡಿದೆ.
ಪ್ರತಿಭಟನಾಕಾರರು ನಗರದ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಜಾಥಾ ಹೊರಟಿದ್ದು, ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ.