ಚೆನ್ನೈ: ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (UAPA) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗಳನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಮಣಿತನೇಯ ಮಕ್ಕಳ್ ಕಚ್ಚಿ ಪಕ್ಷದ ವತಿಯಿಂದ ಚೆನ್ನೈ ಮತ್ತು ಮಧುರೈನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು.
ಅಲ್ಪಸಂಖ್ಯಾತರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಹತ್ತಿಕ್ಕಲು ಮತ್ತು ನಿಷ್ಪಕ್ಷವಾಗಿ ಆಡಳಿತ ನಡೆಸುವಂತಾಗಲು ಚುನಾಯಿತವಾದ ಡಿಎಂಕೆ ಸರ್ಕಾರದ ಆಡಳಿತಕ್ಕೆ ಅಡ್ಡಿಪಡಿಸುತ್ತಿರುವ ರಾಜ್ಯಪಾಲ ಆರ್.ಎನ್.ರವಿ ಅವರ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಪ್ರತಿಭಟನಕಾರರು ಟೀಕಿಸಿದರು.
ಪೊಲೀಸರ ಅನುಮತಿ ನಿರಾಕರಣೆಯ ಹೊರತಾಗಿಯೂ ಸಹಸ್ರಾರು ಸಂಖ್ಯೆಯಲ್ಲಿ ಪ್ರತಿಭಟನಕಾರರು ಬಂದು ಸರ್ಕಾರದ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಕರಾಳ UAPA ಕಾಯ್ದೆಯ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಕಾರರು, ಈ ಕಾಯ್ದೆಯನ್ನು ಹಿಂಪಡೆಯುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.