ಸುಬ್ರಹ್ಮಣ್ಯದಲ್ಲಿ ಭೀಕರ ಮಳೆ: ಎರಡು ಮಕ್ಕಳು ಮಣ್ಣುಪಾಲು

Prasthutha|

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಕುಮಾರಧಾರದಲ್ಲಿ ಭೀಕರ ಮಳೆಯಾಗಿದ್ದು, ಭಾರೀ ಮಳೆಯಿಂದಾಗಿ ಕುಮಾರಧಾರ ಬಳಿಯಲ್ಲಿ ಗುಡ್ಡ ಜರಿದು ಮನೆಯೊಂದು ಕುಸಿದು ಬಿದ್ದಿದ್ದು ಮನೆಯೊಳಗಿನ ಇಬ್ಬರು ಮಕ್ಕಳು ಮಣ್ಣಲ್ಲಿ ಹೂತು ಹೋಗಿದ್ದಾರೆ.

- Advertisement -

ಕುಸುಮಾಧರ ಎಂಬವರ ಮನೆ ಕುಸಿತಗೊಂಡಿದ್ದು ಅವರ ಇಬ್ಬರು ಹೆಣ್ಣುಮಕ್ಕಳು ಮಣ್ಣುಪಾಲಾಗಿದ್ದಾರೆ. ಸುಬ್ರಹ್ಮಣ್ಯ ಪೊಲೀಸರು ಮತ್ತು ಅಗ್ನಿಶಾಮಕ ಧಳ ಸ್ಥಳಕ್ಕೆ ಧಾವಿಸಿದ್ದು ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಪ್ರದೇಶಕ್ಕೆ ಮೃತದೇಹಗಳನ್ನು ಹೊರತೆಗೆಯುವ ನಿಟ್ಟಿನಲ್ಲಿ ಜೆಸಿಬಿ ಬಂದಿದೆ. ಆದರೆ ದುರಂತ ನಡೆದ ಸ್ಥಳಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದು ಬಂದಿದೆ.

- Advertisement -


ಕುಮಾರಧಾರಾದಿಂದ ಪಂಜ ಕಡೆಗೆ ಹೋಗುವ ರಸ್ತೆ ನೆರೆ ನೀರಲ್ಲಿ ಸಂಪೂರ್ಣ ಮುಳುಗಡೆ ಆಗಿದ್ದು, ರಸ್ತೆಗೆ ಅಡ್ಡಲಾಗಿ ಮರ ಕೂಡ ಬಿದ್ದಿರುವುದರಿಂದ ರಸ್ತೆ ಬಂದ್ ಆಗಿದ್ದು ಪರಿಹಾರ ಕಾರ್ಯಕ್ಕೆ ತುಂಬಾ ತೊಂದರೆ ಉಂಟಾಗಿದೆ.

Join Whatsapp