ಮಥುರಾ: ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿ ಮಸೀದಿ ಆವರಣದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಕೋರಿ ಸಿವಿಲ್ ನ್ಯಾಯಾಲಯಕ್ಕೆ ಮೂರು ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ತಿಳಿದು ಬಂದಿದೆ.
2020ರಲ್ಲಿ ಕೃಷ್ಣನ ವಂಶಸ್ಥ ಎಂದು ಹೇಳಿಕೊಂಡಿರುವ ಮನೀಶ್ ಯಾದವ್ ಎಂಬುವವರು ಮಸೀದಿಯನ್ನು ಸ್ಥಳಾಂತರ ಮಾಡುವಂತೆ ಮೊಕದ್ದಮೆ ಹೂಡಿದ್ದರು. ಇದಕ್ಕೆ ಪೂರಕವಾಗಿ, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮನವಿ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಸೀದಿಯೊಳಗೆ ಹಿಂದೂ ದೇವರುಗಳ ಕುರುಹು ಇವೆ ಎಂದು ಅರ್ಜಿದಾರರು ಪ್ರತಿಪಾದಿಸುತ್ತಿದ್ದು ನ್ಯಾಯಾಲಯವು ಬೇಸಿಗೆ ರಜೆ ಮುಗಿದು ವಿಚಾರಣೆ ಕೈಗೆತ್ತಿಕೊಳ್ಳುವ ಹಿನ್ನೆಲೆಯಲ್ಲಿ ಆ ವೇಳೆಗೆ ಅಲ್ಲಿನ ಕುರುಹುಗಳು ನಾಶಪಡಿಸುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿ ಮಸೀದಿ ಆವರಣದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಮನವಿ ಸಲ್ಲಿಸಿದ್ದಾರೆ.