ಪತ್ರಕರ್ತ ಸಿದ್ದೀಕ್ ಕಾಪ್ಪನ್ ಜಾಮೀನು ಅರ್ಜಿ ತಿರಸ್ಕರಿಸಿದ ಮಥುರಾ ನ್ಯಾಯಾಲಯ

Prasthutha: July 6, 2021

ಮಥುರಾ: ಪತ್ರಕರ್ತ ಸಿದ್ದೀಕ್ ಕಾಪ್ಪನ್ ಅವರ ಜಾಮೀನು ಅರ್ಜಿಯನ್ನು ಮಥುರಾ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ.

ತಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ, ತಮಗೆ ಜಾಮೀನು ನೀಡಬೇಕು ಎಂದು ಕೋರಿ ಕೇರಳ ಮೂಲಕ ಪತ್ರಕರ್ತ ಮಥುರಾ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ತಾನೋರ್ವ ಪತ್ರಕರ್ತನಾಗಿದ್ದು, ಕರ್ತವ್ಯದ ನಿಮಿತ್ತ ಹಥ್ರಾಸ್ ಗೆ ತೆರಳುತ್ತಿದ್ದಾಗ ಉತ್ತರ ಪ್ರದೇಶ ಪೊಲೀಸರು ಸುಳ್ಳು ಆರೋಪದಲ್ಲಿ ಬಂಧಿಸಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಿದ್ದರು.

ಕಳೆದ ವರ್ಷ ಅಕ್ಟೋಬರ್ 5 ರಂದು ಸಿದ್ದೀಕ್ ಕಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. ಹಥ್ರಾಸ್ ನಲ್ಲಿ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ವರದಿ ತಯಾರಿಸಲು ಹೋಗುವಾಗ ಸಿದ್ದೀಕ್ ಕಪ್ಪನ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿತ್ತು.

CAA ಮತ್ತು NRC ಪ್ರತಿಭಟನೆಯ ಮೂಲಕ ಕಪ್ಪನ್ ಮತ್ತು ಅವರ ತಂಡ ಉತ್ತರ ಪ್ರದೇಶದಲ್ಲಿ ಕೋಮು ಅಶಾಂತಿ ಸೃಷ್ಟಿಸುವ ಯೋಜನೆಯನ್ನು ರೂಪಿಸಿದೆ ಎಂದು ಉತ್ತರಪ್ರದೇಶ ಪೊಲೀಸ್ ಚಾರ್ಜ್ ಶೀಟ್ ನಲ್ಲಿ ಆರೋಪಿಸಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ