ಹೊಸದಿಲ್ಲಿ: ಕೃಷ್ಣ ಜನ್ಮಭೂಮಿ-ಈದ್ಗಾ ವಿವಾದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮಥುರಾ ಜಿಲ್ಲಾ ನ್ಯಾಯಾಲಯವು ಮಸೀದಿ ಸಂಕೀರ್ಣದ ಅಧಿಕೃತ ಸಮೀಕ್ಷೆಗೆ ಆದೇಶಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿದೆ.
ಜನವರಿ 2 ರ ನಂತರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಶಾಹಿ ಈದ್ಗಾ ಮಸೀದಿಯ ಸಂಕೀರ್ಣವನ್ನು ಸಮೀಕ್ಷೆ ನಡೆಸಬೇಕೆಂದು ಸ್ಥಳೀಯ ನ್ಯಾಯಾಲಯ ಆದೇಶಿಸಿದೆ.
ಕೃಷ್ಣನ ಜನ್ಮಸ್ಥಳದ 13.37 ಎಕರೆ ಭೂಮಿಯಲ್ಲಿದ್ದ ದೇವಾಲಯವನ್ನು ಕೆಡವಿ ಮೊಘಲ್ ಚಕ್ರವರ್ತಿ ಔರಂಗಜೇಬ್ ಈದ್ಗಾ ಮಸೀದಿಯನ್ನು ನಿರ್ಮಿಸಿದ ಎಂದು ಹಿಂದೂ ಪರ ವಕೀಲರು ಪ್ರತಿಪಾದಿಸಿದ್ದಾರೆ.
ಹಿಂದೂ ಸೇನೆಯ ವಿಷ್ಣು ಗುಪ್ತಾ ಅವರು ಸಲ್ಲಿಸಿದ ಮೊಕದ್ದಮೆಯ ಮೇಲೆ ನ್ಯಾಯಾಲಯವು ಈ ಆದೇಶವನ್ನು ನೀಡಿದ್ದು, ಜನವರಿ 20ರೊಳಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಪ್ರಕರಣದ ಎಲ್ಲ ಕಕ್ಷಿದಾರರಿಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.