ಮೌಲಾನಾ ಮುಹಮ್ಮದ್ ಅಹ್ಮದ್ ಬೇಗ್ ನದ್ವಿ ಬಂಧನ ರಾಜಕೀಯ ಸೇಡಿನ ಪರಮಾವಧಿ: ಆಲ್ ಇಂಡಿಯಾ ಇಮಾಮ್ ಕೌನ್ಸಿಲ್

Prasthutha|

ಬೆಂಗಳೂರು: ಇಮಾಮ್ಸ್ ಕೌನ್ಸಿಲ್ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಮುಹಮ್ಮದ್ ಅಹ್ಮದ್ ಬೇಗ್ ನದ್ವಿ ಅವರನ್ನು ಬಂಧಿಸಿರುವುದು ರಾಜಕೀಯ ಸೇಡಿನ ಪರಮಾವಧಿ ಎಂದು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್‌ನ ರಾಷ್ಟ್ರೀಯ ಉಪಾಧ್ಯಕ್ಷ ಹಝ್ರತ್ ಮೌಲಾನ ಹನೀಫ್ ಅಹ್ರಾರ್ ಅಲ್ ಖಾಸ್ಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಮೌಲಾನಾ ಅವರು ಅಖಿಲ ಭಾರತ ಇಮಾಮ್ಸ್ ಕೌನ್ಸಿಲ್‌ನ ರಾಷ್ಟ್ರೀಯ ಅಧ್ಯಕ್ಷರಾಗಿ ದೇಶಾದ್ಯಂತ ಮುಸ್ಲಿಂ ಸಮುದಾಯದ ಧಾರ್ಮಿಕ, ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಜಾಗೃತಿಗಾಗಿ ಮಾರ್ಗದರ್ಶನ ನೀಡುತ್ತಿದ್ದರು. ಅವರು ಲಕ್ನೋದ ದಾರುಲ್ ಉಲೂಮ್ ನದ್ವತುಲ್ ಉಲಮಾದ ಶಿಕ್ಷಣತಜ್ಞ ಮತ್ತು ಮಾಜಿ ಶಿಕ್ಷಕರಾಗಿದ್ದಾರೆ ಎಂದು ತಿಳಿಸಿದರು.

ಮೌಲಾನಾ ಯಾವುದೇ ಕೇಸಿನಲ್ಲಿ ಆರೋಪಿಯಾಗಲೀ ಅಥವಾ ಯಾವುದೇ ಅನುಮಾನಾಸ್ಪದ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಆದರೂ ಯಾವುದೇ ಸೂಚನೆ ನೀಡದೆ ಏಕಾಏಕಿ ಅವರನ್ನು ಬಂಧಿಸಲಾಗಿದೆ. ಧಾರ್ಮಿಕ ಶಿಕ್ಷಕನ ಬಂಧನವು ಇಡೀ ಸಮುದಾಯಕ್ಕೆ ಕಿರುಕುಳ ನೀಡಿದಂತಾಗುತ್ತದೆ. ಇದನ್ನು ಯಾವುದೇ ಸಂದರ್ಭದಲ್ಲಿ ಸಹಿಸಲಾಗುವುದಿಲ್ಲ ಎಂದು ಅವರು ತಿಳಿಸಿದರು.

- Advertisement -


ಆದ್ದರಿಂದ ಮೌಲಾನಾ ಅಹ್ಮದ್ ಬೇಗ್ ನದ್ವಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಆಗ್ರಹಿಸಿದೆ. ಅವರನ್ನು ಬಿಡುಗಡೆ ಮಾಡದಿದ್ದರೆ ಇಡೀ ದೇಶದಲ್ಲಿ ಪ್ರಜಾಸತ್ತಾತ್ಮಕ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

Join Whatsapp