Home ಟಾಪ್ ಸುದ್ದಿಗಳು ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ಮಾಡಿರಬಹುದು: ಈಶ್ವರಪ್ಪ

ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ಮಾಡಿರಬಹುದು: ಈಶ್ವರಪ್ಪ

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಷಡ್ಯಂತ್ರ ಮಾಡಿರಬಹುದು ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.


ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಪ್ರತಿಕ್ರಿಯೆ ನೀಡಿದ ಕೆಎಸ್ ಈಶ್ವರಪ್ಪ, ಯಡಿಯೂರಪ್ಪನವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವುದರ ಹಿಂದೆ ಷಡ್ಯಂತ್ರ ಇದೆ. ಅವರನ್ನು ರಾಜಕೀಯವಾಗಿ ದೂಷಿಸಲು ಈ ತರ ಆಗಿರಬಹುದು. ಆದರೆ ದೂರು ನೀಡಿರುವವರ ಹಿನ್ನೆಲೆಯೂ ಕೂಡ ಸರಿ ಇಲ್ಲ ಎಂದು ತಿಳಿದುಬಂದಿದೆ. ದೂರು ನೀಡುವ ವ್ಯಕ್ತಿ ಈ ಹಿಂದೆಯೂ ಸಾಕಷ್ಟು ಜನರ ವಿರುದ್ಧ ದೂರು ನೀಡಿದ್ದಾರೆ ಎಂದರು.


ಯಡಿಯೂರಪ್ಪ ಅವರನ್ನು ವೈಯಕ್ತಿಕವಾಗಿ ನಾನು ಹತ್ತಿರದಿಂದ ಬಲ್ಲೆ. ಅವರು ಈ ಆರೋಪದಿಂದ ಮುಕ್ತರಾಗುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದ ಕೆಎಸ್ ಈಶ್ವರಪ್ಪ, 40 ವರ್ಷಗಳಿಂದ ಯಡಿಯೂರಪ್ಪನವರನ್ನ ನಾನು ನೋಡುತ್ತಿದ್ದೇನೆ. ಅವರ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದರು.

Join Whatsapp
Exit mobile version