ನವದೆಹಲಿ: ಬಿಜೆಪಿ ಮುಖಂಡರಿಂದ ಸದನದಲ್ಲಿ ನಿಂದನೆಗೊಳಗಾಗಿದ್ದ ಲೋಕಸಭೆ ಸಂಸದ ಡ್ಯಾನಿಶ್ ಅಲಿ ಅವರನ್ನು ಮಾಯಾವತಿ ತಮ್ಮ ಬಹುಜನ ಸಮಾಜ ಪಕ್ಷದಿಂದ ಉಚ್ಛಾಟಿಸಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆಯೇ ಈ ಕ್ರಮಕ್ಕೆ ಕಾರಣ ಎಂದು ಹೇಳಲಾಗಿದೆ. “ಪಕ್ಷದ ನೀತಿಗಳು, ಸಿದ್ಧಾಂತ ಮತ್ತು ಶಿಸ್ತಿನ ವಿರುದ್ಧ ಹೇಳಿಕೆಗಳು ಅಥವಾ ಕ್ರಮಗಳ ವಿರುದ್ಧ ನಿಮಗೆ ಎಚ್ಚರಿಕೆ ನೀಡಲಾಗಿದೆ. ಆದರೆ, ನೀವು ನಿರಂತರವಾಗಿ ಪಕ್ಷದ ವಿರುದ್ಧ ವರ್ತಿಸುತ್ತಿದ್ದೀರಿ” ಎಂದು ಬಿಎಸ್ಪಿ ಹೇಳಿಕೆಯಲ್ಲಿ ತಿಳಿಸಿದೆ.