ಲಕ್ನೋ : ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿದು ಬಂದಿದೆ. ಈ ಮೂಲಕ ಈ ಬಾರಿಯ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಕುರಿತಂತೆ ಬಿಎಸ್ ಪಿ ಸಂಸದ ಸತೀಶ್ ಚಂದ್ರ ಮಿಶ್ರಾ ಅವರು ಮಾಹಿತಿ ನೀಡಿದ್ದು, ನಾನು ಮತ್ತು ಮಾಜಿ ಮುಖ್ಯಮಂತ್ರಿ ಮಾಯಾವತಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಸಮಾಜವಾದಿ ಪಕ್ಷವು 400 ಅಭ್ಯರ್ಥಿಗಳನ್ನು ಹೊಂದಿಲ್ಲದಿದ್ದರೆ, ಹೀಗಿದ್ದೂ 400 ಸ್ಥಾನಗಳನ್ನು ಹೇಗೆ ಗೆಲ್ಲೋದಕ್ಕೆ ಆಗುತ್ತದೆ ಎಂದ ಅವರು, ಎಸ್ ಪಿ ಅಥವಾ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ, ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಸರ್ಕಾರ ರಚಿಸಲು ಹೊರಟಿದೆ ಎಂದು ತಿಳಿಸಿದ್ದಾರೆ.