ಕೋವಿಡ್ ಸಮಯದಲ್ಲಿ ಸಂಸತ್ ನಿರ್ಮಾಣ ಕಾರ್ಯ ಬೇಕಿತ್ತಾ?: ಮಾಜಿ ಸಚಿವ ಎಂ.ಬಿ. ಪಾಟೀಲ್ ಪ್ರಶ್ನೆ

Prasthutha|

ವಿಜಯಪುರ: ದೇಶದಲ್ಲಿ ಜನರು ಸಾಯುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಮಾತ್ರ ರಾಜಪಥ ಅಭಿವೃದ್ಧಿ, ಪ್ರಧಾನಮಂತ್ರಿಗಳ ನಿವಾಸ, ಉಪರಾಷ್ಟ್ರಪತಿಗಳ ನಿವಾಸದ ಪ್ರಗತಿಗೆ ಸಾವಿರಾರು ಕೋಟಿ ವ್ಯಯಿಸುತ್ತಿದೆ. ಕೊರೋನಾ ಸಾಂಕ್ರಾಮಿಕ ರೋಗ ಸಮಯದಲ್ಲಿ ಸಂಸತ್ ನಿರ್ಮಾಣ ಕಾರ್ಯ ಬೇಕಿತ್ತಾ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ್ ಅವರು ಪ್ರಶ್ನಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ದ ಹರಿಹಾಯ್ದಿದ್ದಾರೆ. ಪ್ರಧಾನಿ ಮೋದಿಯವರು ಈ ಹಿಂದೆ ಯಾವ ಮಹಾರಾಜರು ಮಾಡದ ರೀತಿಯಲ್ಲಿ ವರ್ತಿಸುತ್ತಿದ್ದಾರೆ‌. ನಮ್ಮ ವಿಶ್ವಗುರು ದೊಡ್ಡ ಮಹಾರಾಜರು ಎಂದು ವ್ಯಂಗವಾಡಿದರು.

ಪ್ರಧಾನಿ ಮೋದಿಯವರು ನೂತನ ಸಂಸತ್ತು ನಿರ್ಮಾಣ ಯೋಜನೆಯನ್ನು ಕೂಡಲೇ ನಿಲ್ಲಿಸಬೇಕು. ಯೋಜನೆಯನ್ನು ಸದ್ಯಕ್ಕೆ ಕೈ ಬಿಟ್ಟು ಈ ಹಣವನ್ನು ಕೋವಿಡ್ ಉದ್ದೇಶಕ್ಕೆ ಬಳಕೆ ಮಾಡಿಕೊಂಡರೆ ದೇಶದಲ್ಲಿ 62 ಕೋಟಿ ಜನರಿಗೆ ಲಸಿಕೆ ಒದಗಿಸಲು ಸಾಧ್ಯವಾಗುತ್ತದೆ. 20 ಸಾವಿರ ವೆಂಟಿಲೇಟರ್ ಬೆಡ್ ನಿರ್ಮಾಣ ಮಾಡಬಹುದು. ಆದರೆ ಮೋದಿಯವರಿಗೆ ಜನತೆಯ ನೋವು ಆಲಿಸಲು ಸಮಯವಿಲ್ಲ. ಮೋದಿಯವರಿಗೆ ಜನ ಬೇಕೋ ಅಥವಾ ನ್ಯೂ ವಿಸ್ತಾ ಬೇಕೊ ಎಂದು ಅವರು ಪ್ರಶ್ನಿಸಿದ್ದಾರೆ.

Join Whatsapp