ದೆಹಲಿ ಮಹಾನಗರ ಪಾಲಿಕೆ ಚುನಾವಣೆ| ಮತದಾನ ಆರಂಭ

Prasthutha|

ಹೊಸದಿಲ್ಲಿ: ದೆಹಲಿ ಮಹಾನಗರ ಪಾಲಿಕೆಯ (ಎಂಸಿಡಿ) 250 ವಾರ್ಡ್‌ಗಳಿಗೆ ಇಂದು (ಭಾನುವಾರ) ಬಿಗಿ ಭದ್ರತೆಯೊಂದಿಗೆ ಮತದಾನ ಆರಂಭವಾಗಿದೆ.

- Advertisement -

40 ಸಾವಿರ ಪೊಲೀಸರನ್ನು, 20 ಸಾವಿರ ಗೃಹರಕ್ಷಕರನ್ನು ಮತ್ತು ಅರೆಸೇನಾ ಪಡೆಯ 108 ಕಂಪನಿಗಳನ್ನು ಹಾಗೂ ರಾಜ್ಯ ಸಶಸ್ತ್ರ ಪೊಲೀಸ್‌ ಪಡೆಯನ್ನೂ ಭದ್ರತೆಗಾಗಿ ನಿಯೋಜಿಸಲಾಗಿದೆ.

ಸೂಕ್ಷ್ಮ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕಣ್ಗಾವಲಿಗಾಗಿ 60 ಡ್ರೋನ್‌ಗಳನ್ನು ಬಳಸಲಾಗುತ್ತಿದೆ.

- Advertisement -

ಮತದಾನದ ವೇಳೆ ಕೋಮು ಗಲಭೆ ನಡೆಯದಂತೆ ಎಚ್ಚರಿಕೆ ವಹಿಸುವುದು, ಅಭ್ಯರ್ಥಿಗಳು ಮತದಾರರಿಗೆ ಆಮಿಷವೊಡ್ಡದಂತೆ ತಡೆಯುವುದು ಪೊಲೀಸರ ಮುಖ್ಯ ಗುರಿಯಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚುನಾವಣೆಯಲ್ಲಿ 1.45 ಕೋಟಿಗೂ ಅಧಿಕ ಜನರು ಮತದಾನಕ್ಕೆ ಅರ್ಹರಾಗಿದ್ದು, 1,349 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಡಿಸೆಂಬರ್‌ 7ರಂದು ಫಲಿತಾಂಶ ಹೊರಬೀಳಲಿದೆ.  

Join Whatsapp