ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಆಯ್ಕೆ ಮಾಡಿರುವುದನ್ನು ರಾಷ್ಟ್ರೀಯ ಮಹಿಳಾ ಆಯೋಗ ವಿರೋಧಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ, 2018ರ ರಲ್ಲಿ ಮಹಿಳಾ ಐಎಎಸ್ ಅಧಿಕಾರಿಯೋರ್ವಳಿಗೆ ಅನುಚಿತ ಮೆಸೇಜ್ ಕಳುಹಿಸಿದ್ದ ಆರೋಪ ಚರಣ್ ಜಿತ್ ವಿರುದ್ಧ ಕೇಳಿ ಬಂದಿತ್ತು. ಈತನ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗ ಪ್ರಕರಣ ದಾಖಲಿಸಿಕೊಂಡಿತ್ತು. ಇಂತಹ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವುದು ದ್ರೋಹದ ಕೆಲಸ ಎಂದು ಹೇಳಿದ್ದಾರೆ.
ಸದ್ಯ ಮಹಿಳೆಯೋರ್ವಳು ಮುಖ್ಯಸ್ಥರಾಗಿರುವ ಪಕ್ಷದಿಂದ ಆತನನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ. ಕೂಡಲೇ ಸೋನಿಯಾ ಗಾಂಧಿ ಅವರು ಚರಣ್‍ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಬೇಕೆಂದು ಶರ್ಮಾ ಒತ್ತಾಯಿಸಿದ್ದಾರೆ.