ಛತ್ತರ್ಪುರ: ಆಂಬುಲೆನ್ಸ್ ಸಿಗದ ಕಾರಣ ವೃದ್ಧರೊಬ್ಬರು ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನು ತಳ್ಳುಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸಿದ ಕರುಣಾಜನಕ ಘಟನೆ ಮಧ್ಯಪ್ರದೇಶದಲ್ಲಿ ವರದಿಯಾಗಿದೆ.
ವೃದ್ಧರೊಬ್ಬರು ಅಸ್ವಸ್ಥ ಪತ್ನಿಯನ್ನು ತಳ್ಳುಗಾಡಿಯಲ್ಲಿ ಸಾಗಿಸುವ ವೀಡಿಯೋ ವ್ಯಾಪಕ ವೈರಲಾಗಿದೆ.
ಈ ವೀಡಿಯೋವನ್ನು ಹಂಚಿದ ಟ್ವಿಟ್ಟರ್ ಬಳಕೆದಾರರೊಬ್ಬರು, “ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣದಲ್ಲಿ ಮಧ್ಯಪ್ರದೇಶ ಬಹಳ ಮಹತ್ವದ ಪಾತ್ರ ವಹಿಸಿದೆ ಎಂದು ಜಾಗತಿಕ ಹೂಡಿಕೆದಾರರ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದರು. ಏತನ್ಮಧ್ಯೆ, ಮಧ್ಯಪ್ರದೇಶದಲ್ಲಿ ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ ವ್ಯಕ್ತಿಯೊಬ್ಬರು ತನ್ನ ಅನಾರೋಗ್ಯದ ಹೆಂಡತಿಯನ್ನು ತಳ್ಳುಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.