ಬೆಂಗಳೂರು: ಕಾಲೇಜು ಆವರಣದಲ್ಲೇ ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ

Prasthutha|

ಬೆಂಗಳೂರು: ಕಾಲೇಜು ಆವರಣದಲ್ಲೇ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ.

- Advertisement -

ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ.
ಮೃತ ಭಾಸ್ಕರ್ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ.

ಸುಮಾರು ಶುಕ್ರವಾರ ರಾತ್ರಿ 9.30ರ ವೇಳೆ ಭಾಸ್ಕರ್​ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

- Advertisement -

ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕುರಿತು ಪೊಲೀಸರು ಕಾಲೇಜಿನ ಸಿಸಿ ಟಿವಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.



Join Whatsapp