ರಾಷ್ಟ್ರೀಯ ಭದ್ರತೆಯ ಹಿನ್ನೆಲೆಯಲ್ಲಿ ಮೀಡಿಯಾ ಒನ್ ಚಾನೆಲ್ ನಿಷೇಧದ ಕಾರಣ ಬಹಿರಂಗಪಡಿಸಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ

Prasthutha|

ನವದೆಹಲಿ: ರಾಷ್ಟ್ರೀಯ ಭದ್ರತೆಯ ಹಿನ್ನೆಲೆಯಲ್ಲಿ ಮಲಯಾಳಂ ಮೀಡಿಯಾ ಒನ್ ಚಾನೆಲ್ ನಿಷೇಧದ ಕುರಿತ ಕಾರಣಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲವೆಂದು ಕೇಂದ್ರ ಸರ್ಕಾರ ಸುಪ್ರೀಮ್ ಕೋರ್ಟ್’ಗೆ ತಿಳಿಸಿದೆ.

- Advertisement -

ಭದ್ರತಾ ಕಾರಣಗಳನ್ನು ನೀಡಿ ಕೇಂದ್ರ ಸರ್ಕಾರ ಮೀಡಿಯಾ ಒನ್ ಸುದ್ದಿವಾಹಿನಿ ಚಾನೆಲ್’ನ ಪ್ರಸಾರನ್ನು ಜನವರಿ 31 ರಂದು ಸ್ಥಗಿತಗೊಳಿಸಿತ್ತು.

ಮಾರ್ಚ್ 2 ರಂದು ಮೀಡಿಯಾ ಒನ್ ಸುದ್ದಿವಾಹಿನಿಯ ವಿರುದ್ಧ ಕೇಂದ್ರ ಸರ್ಕಾರ ಹೇರಿದ್ದ ನಿಷೇಧವನ್ನು ಕೇರಳ ಹೈಕೋರ್ಟ್ ಎತ್ತಿ ಹಿಡಿದಿತ್ತು. ಈ ಆದೇಶವನ್ನು ಪ್ರಶ್ನಿಸಿ ಮೀಡಿಯಾ ಒನ್ ಸುಪ್ರೀಮ್ ಕೋರ್ಟ್ ಮೆಟ್ಟಿಲೇರಿತ್ತು.

- Advertisement -

ಈ ಮಧ್ಯೆ ಮೀಡಿಯಾ ಒನ್ ಚಾನೆಲ್ ನ ನಿಷೇಧದ ಕಾರಣಗಳನ್ನು ಬಹಿರಂಗಪಡಿಸುವಂತೆ ಸುಪ್ರೀಮ್ ಕೋರ್ಟ್ ಕೇಂದ್ರಕ್ಕೆ ಸೂಚಿಸಿತ್ತು. ಆದರೆ ಕೇಂದ್ರ ಸರ್ಕಾರ ಇದರ ಕಾರಣಗಳನ್ನು ತಿಳಿಸಲು ನಿರಾಕರಿಸಿದೆ.

Join Whatsapp