Home ಟಾಪ್ ಸುದ್ದಿಗಳು ರಾಷ್ಟ್ರೀಯ ಭದ್ರತೆಯ ಹಿನ್ನೆಲೆಯಲ್ಲಿ ಮೀಡಿಯಾ ಒನ್ ಚಾನೆಲ್ ನಿಷೇಧದ ಕಾರಣ ಬಹಿರಂಗಪಡಿಸಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ

ರಾಷ್ಟ್ರೀಯ ಭದ್ರತೆಯ ಹಿನ್ನೆಲೆಯಲ್ಲಿ ಮೀಡಿಯಾ ಒನ್ ಚಾನೆಲ್ ನಿಷೇಧದ ಕಾರಣ ಬಹಿರಂಗಪಡಿಸಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರೀಯ ಭದ್ರತೆಯ ಹಿನ್ನೆಲೆಯಲ್ಲಿ ಮಲಯಾಳಂ ಮೀಡಿಯಾ ಒನ್ ಚಾನೆಲ್ ನಿಷೇಧದ ಕುರಿತ ಕಾರಣಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲವೆಂದು ಕೇಂದ್ರ ಸರ್ಕಾರ ಸುಪ್ರೀಮ್ ಕೋರ್ಟ್’ಗೆ ತಿಳಿಸಿದೆ.

ಭದ್ರತಾ ಕಾರಣಗಳನ್ನು ನೀಡಿ ಕೇಂದ್ರ ಸರ್ಕಾರ ಮೀಡಿಯಾ ಒನ್ ಸುದ್ದಿವಾಹಿನಿ ಚಾನೆಲ್’ನ ಪ್ರಸಾರನ್ನು ಜನವರಿ 31 ರಂದು ಸ್ಥಗಿತಗೊಳಿಸಿತ್ತು.

ಮಾರ್ಚ್ 2 ರಂದು ಮೀಡಿಯಾ ಒನ್ ಸುದ್ದಿವಾಹಿನಿಯ ವಿರುದ್ಧ ಕೇಂದ್ರ ಸರ್ಕಾರ ಹೇರಿದ್ದ ನಿಷೇಧವನ್ನು ಕೇರಳ ಹೈಕೋರ್ಟ್ ಎತ್ತಿ ಹಿಡಿದಿತ್ತು. ಈ ಆದೇಶವನ್ನು ಪ್ರಶ್ನಿಸಿ ಮೀಡಿಯಾ ಒನ್ ಸುಪ್ರೀಮ್ ಕೋರ್ಟ್ ಮೆಟ್ಟಿಲೇರಿತ್ತು.

ಈ ಮಧ್ಯೆ ಮೀಡಿಯಾ ಒನ್ ಚಾನೆಲ್ ನ ನಿಷೇಧದ ಕಾರಣಗಳನ್ನು ಬಹಿರಂಗಪಡಿಸುವಂತೆ ಸುಪ್ರೀಮ್ ಕೋರ್ಟ್ ಕೇಂದ್ರಕ್ಕೆ ಸೂಚಿಸಿತ್ತು. ಆದರೆ ಕೇಂದ್ರ ಸರ್ಕಾರ ಇದರ ಕಾರಣಗಳನ್ನು ತಿಳಿಸಲು ನಿರಾಕರಿಸಿದೆ.

Join Whatsapp
Exit mobile version