Home ಟಾಪ್ ಸುದ್ದಿಗಳು ಮಾಧ್ಯಮಗಳು ಯಾವುದೇ ವ್ಯಕ್ತಿಯ ತೇಜೋವಧೆ ಮಾಡಬಾರದು: ವಿಶ್ವೇಶ್ವರ ಹೆಗಡೆ ಕಾಗೇರಿ

ಮಾಧ್ಯಮಗಳು ಯಾವುದೇ ವ್ಯಕ್ತಿಯ ತೇಜೋವಧೆ ಮಾಡಬಾರದು: ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಂಗಳೂರು: ಪ್ರಶ್ನಾರ್ಥಕ ಚಿಹ್ನೆ, ಉನ್ನತ ಮೂಲಗಳ ಮಾಹಿತಿ ಆಧಾರದಲ್ಲಿ ಮಾಧ್ಯಮಗಳು ಯಾವುದೇ ವ್ಯಕ್ತಿಯ ತೇಜೋವಧೆ ಮಾಡಬಾರದು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ವಿಧಾನವೇಳೆಯಲ್ಲಿ ಶೂನ್ಯವೇಳೆ ಸಂದರ್ಭದಲ್ಲಿ ಗೂಳಿಹಟ್ಟಿ ಶೇಖರ್‌ ಅವರು ವಿಷಯ ಮಂಡಿಸಿ, ಪತ್ರಿಕೆ ಮತ್ತು ಟಿವಿಯಲ್ಲಿ ತಾವು “ಆಪರೇಷನ್‌ ಹಸ್ತ’ದಡಿ ಪಕ್ಷ ತೊರೆಯುವುದಾಗಿ ಸುದ್ದಿಯಾಗಿದೆ.

ಟಿ.ವಿ.ಯಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದ ವೇಳೆ ನಾನು ಸದನದಲ್ಲಿದ್ದೆ, ಸಂಜೆ ಹೊತ್ತಿಗೆ ಕ್ಷೇತ್ರದ ಮತದಾರರು ನನ್ನನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಇದರಿಂದ ನನ್ನ ಹಕ್ಕುಚ್ಯುತಿ ಆಗಿದೆ. ಒಂದಲ್ಲ ಒಂದು ರೀತಿಯಲ್ಲಿ ಮುಜುಗರವಾಗುತ್ತದೆ. ನಾನು ಪಕ್ಷ ಬಿಡುವ ಮಾತು ಆಡಿಲ್ಲ, ಆದರೂ ತೇಜೋವಧೆ ಮಾಡಲಾಗುತ್ತಿದೆ ಎಂದರು.

ಆಗ, ಕಾನೂನು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಮಾತನಾಡಿ, ಗೂಳಿಹಟ್ಟಿ ಶೇಖರ್‌ ಪಕ್ಷ ಬಿಡುವುದಿಲ್ಲ ಎಂದಿದ್ದಾರೆ. ಹಾಗಾಗಿ ಸಮಸ್ಯೆ ಮುಗಿದಿದೆ. ಆದರೆ, ಶಾಸಕರು ಮತ್ತು ಜನಪ್ರತಿನಿಧಿಗಳ ತೇಜೋವಧೆ ಮಾಡಬಾರದು ಎಂದು ಹೇಳಿದ್ದಾರೆ.

Join Whatsapp
Exit mobile version