Home ಟಾಪ್ ಸುದ್ದಿಗಳು ಮೀಡಿಯಾ ಒನ್ ಸುದ್ದಿವಾಹಿನಿಗೆ ನಿಷೇಧ: ಕೇಂದ್ರ ಸರ್ಕಾರಕ್ಕೆ ಸುಪ್ರೀಮ್ ಕೋರ್ಟ್ ನೋಟಿಸ್

ಮೀಡಿಯಾ ಒನ್ ಸುದ್ದಿವಾಹಿನಿಗೆ ನಿಷೇಧ: ಕೇಂದ್ರ ಸರ್ಕಾರಕ್ಕೆ ಸುಪ್ರೀಮ್ ಕೋರ್ಟ್ ನೋಟಿಸ್

ನವದೆಹಲಿ: ಮೀಡಿಯಾ ಒನ್ ಸುದ್ದಿವಾಹಿನಿಯನ್ನು ನಿಷೇಧಿಸಿದ ಕೇಂದ್ರ ನಡೆಯನ್ನು ವಿರೋಧಿಸಿ ಸಂಸ್ಥೆ ಸುಪ್ರೀಮ್ ಕೋರ್ಟ್ ಗೆ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಸಡೆಸುತ್ತಿದ್ದು, ಇದಕ್ಕೆ ಪೂರಕವಾದ ಎಲ್ಲಾ ಕಡತಗಳನ್ನು ನ್ಯಾಯಾಲಯಕ್ಕೆ ಒಪ್ಪಿಸುವಂತೆ ಸೂಚಿಸಿ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಸೂರ್ಯಕಾಂತ್ ಮತ್ತು ವಿಕ್ರಮ್ ನಾಥ್ ಅವರನ್ನೊಳಗೊಂಡ ಪೀಠವು ಮುಂದಿನ ವಿಚಾರಣೆಯನ್ನು ಮಾರ್ಚ್ 15 ಕ್ಕೆ ಮುಂದೂಡಿದೆ. ಈ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಕಡತಗಳನ್ನು ನ್ಯಾಯಾಲಯಕ್ಕೆ ಒಪ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ದುಶ್ಯಂತ್ ದವೆ ಸುಪ್ರೀಮ್ ಕೋರ್ಟ್ ನಲ್ಲಿ ವಾದ ಮಂಡಿಸಿದ್ದಾರೆ.

ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟು ಮಾಡುವ ನೆಪವೊಡ್ಡಿ ಮೀಡಿಯಾ ಒನ್ ಸುದ್ದಿವಾಹಿನಿಯನ್ನು ಕೇಂದ್ರ ಸರ್ಕಾರ ಕಳೆದ ತಿಂಗಳು ನಿಷೇಧಿಸಿತ್ತು.

Join Whatsapp
Exit mobile version