ತಿರುವನಂತಪುರ: ವೈದ್ಯಕೀಯ ತಪಾಸಣೆಗಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಅಮೆರಿಕಕ್ಕೆ ತೆರಳಿದ್ದಾರೆ.
ಸುಮಾರು ಹತ್ತು ದಿನಗಳ ಕಾಲ ವಿಜಯನ್ ವಿದೇಶದಲ್ಲಿ ಇರಲಿದ್ದಾರೆ. ಆದರೆ ಚಿಕಿತ್ಸೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಮೂಲಗಳ ಪ್ರಕಾರ, ಅವರು ಮುಂದಿನ ಸಚಿವ ಸಂಪುಟ ಸಭೆಯ ಅಧ್ಯಕ್ಷತೆಯನ್ನು ಆನ್‌ಲೈನ್‌ನಲ್ಲಿಯೇ ನಿರ್ವಹಿಸುವ ಸಾಧ್ಯತೆಯಿದೆ.
ಕೇರಳದಲ್ಲಿ ಆರೋಗ್ಯ ಕ್ಷೇತ್ರದ ನ್ಯೂನತೆಗಳ ಕುರಿತು ವಿವಾದ ಎದುರಿಸುತ್ತಿರುವ ಈ ಹೊತ್ತಿನಲ್ಲಿ ಅಮೆರಿಕಕ್ಕೆ ತೆರಳಿರುವ ವಿಜಯನ್ ವಿರುದ್ಧ ವಿರೋಧ ಪಕ್ಷಗಳು ಟೀಕಾಪ್ರಹಾರ ನಡೆಸಿವೆ.
