►ಸಂಬಂಧಿಕರು ಮಾಡಿದ ವೀಡಿಯೋ ವೈರಲ್ !
ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಐಸಿಯು ಸಿಬ್ಬಂದಿಗಳು ರೋಗಿಗಳಿಗೆ ಚಿಕಿತ್ಸೆ ನೀಡುವ ಬದಲು ತಮ್ಮ ಕಂಪ್ಯೂಟರ್ ನಲ್ಲಿ ಆಟವಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗಿದೆ.
ವಗ್ಗದ ವಿಜಯ್ (40) ಎಂಬ ವ್ಯಕ್ತಿ ಹೈ ಬೀಪಿ ಸಮಸ್ಯೆಯಿಂದ ಬಿದ್ದು ತಲೆಗೆ ಪೆಟ್ಟು ಬಿದ್ದಿದ್ದು, ಜನವರಿ 22 ರಂದು ತಕ್ಷಣ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ರೋಗಿಯು ಆಸ್ಪತ್ರೆಗೆ ತಲುಪಿದಾಗ ಆತನಿಗೆ ಚಿಕಿತ್ಸೆ ನೀಡುವ ಬದಲು, ಐಸಿಯು ವೈದ್ಯರು ಮತ್ತು ಇತರ ಸಿಬ್ಬಂದಿ, ತಮ್ಮ ಕಂಪ್ಯೂಟರ್ ನಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ.
ರೋಗಿಗೆ ಚಿಕಿತ್ಸೆ ನೀಡದೆ , ಖಾಸಗಿ ಆಸ್ಪತ್ರೆಗೆ ಹೋಗುವಂತೆ ವೈದ್ಯರು ಸೂಚಿಸಿದ್ದಾರೆಂದು ಕುಟುಂಬದವರು ಆರೋಪಿಸಿದ್ದಾರೆ.
ಕರ್ತವ್ಯ ಲೋಪವೆಸಗಿರುವ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರೋಗಿಯ ಕುಟುಂಬಸ್ಥರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.