Home ಟಾಪ್ ಸುದ್ದಿಗಳು ರೈಲಿಗೆ ತಲೆಕೊಟ್ಟು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ರೈಲಿಗೆ ತಲೆಕೊಟ್ಟು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಕೊಪ್ಪಳ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದ ಕಿಡದಾಳ್ ಬಳಿ ನಡೆದಿದೆ.


ತೇಜಶ್ರೀ (22) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.


ಬಳ್ಳಾರಿಯ ತೇಜಶ್ರೀ, ಕೊಪ್ಪಳದ ಆಸ್ಪತ್ರೆಯಲ್ಲಿ ಇಂಟರ್ನ್ಶಿಪ್ ಕೆಲಸ ಮಾಡುತ್ತಿದ್ದರು. ಆದರೆ ಮಾನಸಿಕವಾಗಿ ನೊಂದಿದ್ದ ಈಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳೀಯರು ಕೂಡಲೇ ಸ್ಥಳೀಯರು ಆಸ್ಪತ್ರೆಯಲ್ಲಿ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


ಆದರೆ ಸಾವಿಗೆ ನಿಖರ ಕಾರಣ ಇನ್ನೂ ಹೊರಬಂದಿಲ್ಲ. ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version