Home ಟಾಪ್ ಸುದ್ದಿಗಳು ಸಹಪಾಠಿಯ ಕಿರುಕುಳ: ಕಾಲೇಜು ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಸಹಪಾಠಿಯ ಕಿರುಕುಳ: ಕಾಲೇಜು ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಉತ್ತರ ಪ್ರದೇಶ: ಸಹಪಾಠಿಯ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೀರತ್ ನ ಸುಭರ್ತಿ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ಸುಭಾರ್ತಿ ವಿಶ್ವವಿದ್ಯಾಲಯದ ಎರಡನೇ ವರ್ಷದ ಬಿಡಿಎಸ್ ವಿದ್ಯಾರ್ಥಿನಿ ವಾನಿಯಾ ಶೇಖ್ ಮೃತಪಟ್ಟ ದುರ್ದೈವಿ.

ವಾನಿಯಾ ಶೇಖ್ ಸಹಪಾಠಿಯಾದ ಸಿದ್ಧಾಂತ್ ಪನ್ವಾರ್ ಎಂಬಾತ ಆಕೆಗೆ ನಿರಂತರ ಕಿರುಕುಳ ನೀಡುತ್ತಿದ್ದನು ಎಂದು ಆರೋಪಿಸಲಾಗಿದ್ದು, ಬುಧವಾರ ಅವಳು ಅದನ್ನು ಪ್ರತಿರೋಧಿಸಿದಾಗ ಎಲ್ಲರ ಮಂದೆ ಕಪಾಳಕ್ಕೆ ಹೊಡೆದಿದ್ದನು ಎನ್ನಲಾಗಿದೆ. ಇದರಿಂದ ಅವಮಾನಿತಳಾದ ಯುವತಿ ವಿಶ್ವವಿದ್ಯಾಲಯದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಬಾಲಕಿಯ ತಂದೆಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಗುರುವಾರ ಆರೋಪಿ ಸಿದ್ಧಾಂತ್ ಕುಮಾರ್ ಪನ್ವಾರ್ ಅವರನ್ನು ಬಂಧಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎಂದು ಗ್ರಾಮೀಣ ಎಸ್ಪಿ ಕೇಶವ್ ಕುಮಾರ್ ತಿಳಿಸಿದ್ದಾರೆ.

Join Whatsapp
Exit mobile version