ಕಾಲೇಜಿನಲ್ಲಿ ರ್‍ಯಾಗಿಂಗ್: ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

Prasthutha|

ಹೈದರಾಬಾದ್: ರ್‍ಯಾಗಿಂಗ್ ಹಿನ್ನೆಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

- Advertisement -

ಡಿ. ಪ್ರೀತಿ (26) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.


ಪ್ರೀತಿ ಕಾಕತೀಯ ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ಓದುತ್ತಿದ್ದಳು. ಈ ವೇಳೆ ಆಕೆ ಸೀನಿಯರ್ ವಿದ್ಯಾರ್ಥಿಗಳಿಂದ ರ್ಯಾಗಿಂಗ್ಗೆ ಒಳಗಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ಗೆ ದಾಖಲಿಸಲಾಗಿತ್ತು. ಆದರೆ 4 ದಿನಗಳ ನಂತರ ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ.

- Advertisement -


ಪ್ರೀತಿ ಸೀನಿಯರ್ ವಿರುದ್ಧ ಕಾಲೇಜು ಹಾಗೂ ಆಸ್ಪತ್ರೆಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಆಕೆಯ ತಂದೆ ಆರೋಪಿಸಿದ್ದಾರೆ.



Join Whatsapp