ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

Prasthutha|

ಕೋಲಾರ: ಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಕಲ್ಲು ಕ್ವಾರಿಯಲ್ಲಿನ ನೀರಿಗೆ ಹಾರಿ ಆತ್ಮಹತ್ಯೆಗೈದ ಘಟನೆ ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ನಡೆದಿದೆ.

- Advertisement -

ಹೊಸಕೋಟೆ ತಾಲೂಕಿನ ಎಂವಿಜೆ ಮೆಡಿಕಲ್ ಕಾಲೇಜಿನ ದರ್ಶಿನಿ (24) ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿ.

ಬಳ್ಳಾರಿ ಮೂಲದ ದರ್ಶಿನಿ ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಿದ್ಯಾರ್ಥಿನಿಯ ಸ್ನೇಹಿತರು ತಿಳಿಸಿದ್ದಾರೆ. ದರ್ಶಿನಿ ಎಂವಿಜೆ ಮೆಡಿಕಲ್ ಕಾಲೇಜಿನಲ್ಲಿ ಎಂಡಿ ಪಿಡಿಯಾಟ್ರಿಕ್ ವಿದ್ಯಾರ್ಥಿನಿಯಾಗಿದ್ದಳು.

- Advertisement -

ವಿಧ್ಯಾರ್ಥಿನಿಯ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಮೇಲೆತ್ತಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.



Join Whatsapp