Home ಜಾಲತಾಣದಿಂದ ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಕೋಲಾರ: ಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಕಲ್ಲು ಕ್ವಾರಿಯಲ್ಲಿನ ನೀರಿಗೆ ಹಾರಿ ಆತ್ಮಹತ್ಯೆಗೈದ ಘಟನೆ ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ನಡೆದಿದೆ.

ಹೊಸಕೋಟೆ ತಾಲೂಕಿನ ಎಂವಿಜೆ ಮೆಡಿಕಲ್ ಕಾಲೇಜಿನ ದರ್ಶಿನಿ (24) ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿ.

ಬಳ್ಳಾರಿ ಮೂಲದ ದರ್ಶಿನಿ ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಿದ್ಯಾರ್ಥಿನಿಯ ಸ್ನೇಹಿತರು ತಿಳಿಸಿದ್ದಾರೆ. ದರ್ಶಿನಿ ಎಂವಿಜೆ ಮೆಡಿಕಲ್ ಕಾಲೇಜಿನಲ್ಲಿ ಎಂಡಿ ಪಿಡಿಯಾಟ್ರಿಕ್ ವಿದ್ಯಾರ್ಥಿನಿಯಾಗಿದ್ದಳು.

ವಿಧ್ಯಾರ್ಥಿನಿಯ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಮೇಲೆತ್ತಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

Join Whatsapp
Exit mobile version